ನಾಪೋಕ್ಲುವಿನಲ್ಲಿ ರಸ್ತೆ ಸುರಕ್ಷತಾ ಸಪ್ತಾಹದ ಪ್ರಯುಕ್ತ ಪೊಲೀಸರಿಂದ ಜನಜಾಗೃತಿ ಜಾಥಾ

Jan 7, 2026 - 15:29
 0  186
ನಾಪೋಕ್ಲುವಿನಲ್ಲಿ ರಸ್ತೆ ಸುರಕ್ಷತಾ ಸಪ್ತಾಹದ ಪ್ರಯುಕ್ತ ಪೊಲೀಸರಿಂದ ಜನಜಾಗೃತಿ ಜಾಥಾ

ವರದಿ:ಝಕರಿಯ ನಾಪೋಕ್ಲು

ನಾಪೋಕ್ಲು : ಕೊಡಗು ಜಿಲ್ಲಾ ಪೊಲೀಸ್ ನಾಪೋಕ್ಲು ಪೊಲೀಸ್ ಠಾಣೆಯ ವತಿಯಿಂದ ರಸ್ತೆ ಸುರಕ್ಷತಾ ಸಪ್ತಾಹದ ಅಂಗವಾಗಿ ವಿವಿಧ ಶಾಲೆಗಳ ಸಹಯೋಗದೊಂದಿಗೆ ನಾಪೋಕ್ಲುವಿನಲ್ಲಿ ಜನಜಾಗೃತಿ ಜಾಥಾ ಕಾರ್ಯಕ್ರಮ ನಡೆಸಲಾಯಿತು.

 ನಾಪೋಕ್ಲು ಪಟ್ಟಣದ ಮಾರುಕಟ್ಟೆ ಬಳಿಯಿಂದ ಪಟ್ಟಣದ ಮುಖ್ಯಬೀದಿಗಳಲ್ಲಿ ಜಾಥಾ ನಡೆಸಿದ ವಿದ್ಯಾರ್ಥಿಗಳು ಹಾಗೂ ಪೊಲೀಸರು ರಸ್ತೆ ಸುರಕ್ಷತಾ ನಿಯಮಗಳ ವಿವಿಧ ಘೋಷವಾಕ್ಯ ದೊಂದಿಗೆ ಸಾರ್ವಜನಿಕರಿಗೆ ಅರಿವು ಮೂಡಿಸಿದರು. 

ನಾಪೋಕ್ಲು ಠಾಣಾಧಿಕಾರಿ ಪಿ.ಜಿ. ರಾಘವೇಂದ್ರ ಅವರು ಮಾತನಾಡಿ ವಾಹನ ಚಾಲನೆಯ ಸಂದರ್ಭ ರಸ್ತೆ ಸುರಕ್ಷತಾ ಪಾಲನೆ, ಸಂಚಾರ ಕಾನೂನು, ರಸ್ತೆ ಅಪಘಾತದ ಸಂದರ್ಭ ನಾಗರಿಕರು ತೆಗೆದುಕೊಳ್ಳಬೇಕಾದ ಜವಾಬ್ದಾರಿಯ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಿದರು.

ಈ ಸಂದರ್ಭ ನಾಪೋಕ್ಲು ಪೊಲೀಸ್ ಠಾಣೆಯ ಸಹಾಯಕ ಠಾಣಾಧಿಕಾರಿ ಫ್ರಾನ್ಸಿಸ್, ನಾಪೋಕ್ಲುವಿನ ವಿವಿಧ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ನಾಪೋಕ್ಲು ಪೊಲೀಸ್ ಠಾಣೆಯ ಸಿಬ್ಬಂದಿಗಳು ಪಾಲ್ಗೊಂಡಿದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0