ರಾಷ್ಟ್ರೀಯ ಏಕತಾ ದಿನದ ಪ್ರಯುಕ್ತ ನಾಪೋಕ್ಲುವಿನಲ್ಲಿ ಪೊಲೀಸರಿಂದ ಏಕತಾ ಓಟ

ರಾಷ್ಟ್ರೀಯ ಏಕತಾ ದಿನದ ಪ್ರಯುಕ್ತ ನಾಪೋಕ್ಲುವಿನಲ್ಲಿ  ಪೊಲೀಸರಿಂದ ಏಕತಾ ಓಟ

ವರದಿ:ಝಕರಿಯ ನಾಪೋಕ್ಲು

ನಾಪೋಕ್ಲು : ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 150ನೇ ಜನ್ಮದಿನಾಚರಣೆಯ ರಾಷ್ಟ್ರೀಯ ಏಕತಾ ದಿನದ ಪ್ರಯುಕ್ತ ಪೊಲೀಸರಿಂದ ನಾಪೋಕ್ಲುವಿನಲ್ಲಿ ಏಕತಾ ಓಟವನ್ನು ನಡೆಸಲಾಯಿತು. ನಾಪೋಕ್ಲು ಪೊಲೀಸ್ ಠಾಣೆಯ ಸಹಾಯಕ ಠಾಣಾಧಿಕಾರಿ ಫ್ರಾನ್ಸಿಸ್ ಅವರ ನೇತೃತ್ವದಲ್ಲಿ ಪೊಲೀಸರು ಹಾಗೂ ಸಾರ್ವಜನಿಕರು ಪ್ರತಿಜ್ಞಾವಿಧಿ ಸ್ವೀಕರಿಸಿದರು.

ಬಳಿಕ ನಾಪೋಕ್ಲು ಪಟ್ಟಣದಿಂದ ಮಾರುಕಟ್ಟೆ ಆವರಣದವರೆಗೆ ಏಕತಾ ಓಟವನ್ನು ನಡೆಸಿ ಏಕತೆಯ ಸಂದೇಶವನ್ನು ಸಾರಿದರು. ಈ ಸಂದರ್ಭ ನಾಪೋಕ್ಲು ಪೊಲೀಸ್ ಠಾಣೆಯ ಸಿಬ್ಬಂದಿಗಳು,ನಾಪೋಕ್ಲುವಿನ ಆಟೋ ಚಾಲಕರು, ಸಾರ್ವಜನಿಕರು ಪಾಲ್ಗೊಂಡಿದ್ದರು.