ಟಿಂಬರ್ ಯೂನಿಯನ್ ಸದಸ್ಯರೊಂದಿಗೆ ಸಿದ್ದಾಪುರ ದಲ್ಲಿ ಪೊಲೀಸ್ ಸಭೆ : ಜಿಲ್ಲಾಡಳಿತದ ಆದೇಶ ಪಾಲನೆಗೆ ಸೂಚನೆ
ಸಿದ್ದಾಪುರ:- ಸಿದ್ದಾಪುರ ಪೊಲೀಸ್ ಠಾಣೆಯ ಠಾಣಾಧಿಕಾರಿ ಮಂಜುನಾಥ್ ಅವರ ನೇತೃತ್ವದಲ್ಲಿ ಸಿದ್ದಾಪುರ ಟಿಂಬರ್ ಯೂನಿಯನ್ ಪದಾಧಿಕಾರಿಗಳು ಹಾಗೂ ಸದಸ್ಯರ ಸಭೆ ಪೊಲೀಸ್ ಠಾಣೆಯಲ್ಲಿ ನಡೆಯಿತು.
ಸಭೆಯಲ್ಲಿ ಕೊಡಗು ಜಿಲ್ಲೆಯಾದ್ಯಂತ ಮುಂಗಾರು ಮಳೆಯ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಜಾರಿಗೊಳಿಸಿರುವ ಮರಳು ಮತ್ತು ಮರದ ದಿಮ್ಮಿಗಳ ಸಾಗಾಣಿಕೆ ಹಾಗೂ ಭಾರಿ ವಾಹನಗಳ ಸಂಚಾರಕ್ಕೆ ಸಂಬಂಧಿಸಿದ ಆದೇಶವನ್ನು ವ್ಯಾಪಾರಿಗಳು ಕಡ್ಡಾಯವಾಗಿ ಪಾಲಿಸಬೇಕು ಎಂದು ಸೂಚಿಸಲಾಯಿತು.
ಇದಲ್ಲದೆ, ವಾಹನಗಳಲ್ಲಿ ನಿಗದಿತ ಮಿತಿಗಿಂತ ಹೆಚ್ಚು ಭಾರ (ಓವರ್‌ಲೋಡ್) ಸಾಗಿಸಬಾರದು, ರಸ್ತೆ ತಡೆ ಉಂಟಾಗುವ ರೀತಿಯಲ್ಲಿ ವಾಹನಗಳನ್ನು ನಿಲ್ಲಿಸಬಾರದು ಹಾಗೂ ಎಲ್ಲ ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಠಾಣಾಧಿಕಾರಿ ಮಂಜುನಾಥ್ ತಿಳಿಸಿದರು.
ನಿಯಮ ಉಲ್ಲಂಘಿಸಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು. ಸಭೆಯಲ್ಲಿ ಸಿದ್ದಾಪುರ ಟಿಂಬರ್ ಯೂನಿಯನ್ ಪದಾಧಿಕಾರಿಗಳು, ಸದಸ್ಯರು ಹಾಗೂ ಪೊಲೀಸ್ ಸಿಬ್ಬಂದಿ ಉಪಸ್ಥಿತರಿದ್ದರು.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0

