ಪೊನ್ನಂಪೇಟೆಯಲ್ಲಿ ಪೊಲೀಸರ ಪಥಸಂಚಲನ

ಪೊನ್ನಂಪೇಟೆ:- ವಿರಾಜಪೇಟೆ ಮತ್ತು ಪೊನ್ನಂಪೇಟೆಯಲ್ಲಿ ಗೌರಿ ಗಣೇಶ ಮೂರ್ತಿಗಳ ವಿಸರ್ಜನೋತ್ಸವ, ಈದ್ ಮಿಲಾದ್ ,ಓಣಂ, ಹಾಗೂ ದಸರಾ ಹಬ್ಬದ ಹಿನ್ನೆಲೆಯಲ್ಲಿ ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ವಿರಾಜಪೇಟೆ ಡಿವೈಎಸ್ಪಿ ಎಸ್.ಮಹೇಶ್ ಕುಮಾರ್ ಅವರ ಮುಂದಾಳತ್ವದಲ್ಲಿ ಗೋಣಿಕೊಪ್ಪ ವೃತನಿರೀಕ್ಷಕ ಆರ್. ಶಿವರಾಜ್ ಮುಂದೋಳ ಹಾಗೂ ಕುಟ್ಟ ವೃತನಿರೀಕ್ಷಕ ಬಿ ಎಸ್ ಶಿವರುದ್ರ ಅವರ ನೇತೃತ್ವದಲ್ಲಿ ಪೊನ್ನಂಪೇಟೆಯ ಪೊಲೀಸ್ ಠಾಣೆಯಿಂದ ಹೊರಟು ನಗರದ ಪ್ರಮುಖ ರಸ್ತೆಗಳಲ್ಲಿ ಪೊಲೀಸರು ಪಥಸಂಚಲನ ನಡೆಸುವುದರ ಮೂಲಕ ಸಾರ್ವಜನಿಕರಲ್ಲಿ ಸ್ಥೈರ್ಯ ತುಂಬಿದರು.
ವಿರಾಜಪೇಟೆ ಗ್ರಾಮಾಂತರ ಠಾಣಾಧಿಕಾರಿ ಲತಾ, ವಿರಾಜಪೇಟೆ ನಗರ ಠಾಣಾಧಿಕಾರಿ ಪ್ರಮೋದ್ ಕುಮಾರ್, ವಿರಾಜಪೇಟೆ ನಗರ ಅಪರಾಧ ವಿಭಾಗದ ಠಾಣಾಧಿಕಾರಿಗಳಾದ ಕಾವೇರಪ್ಪ , ವಾಣಿಶ್ರೀ, ಗೋಣಿಕೊಪ್ಪ ಠಾಣಾಧಿಕಾರಿ ಪ್ರದೀಪ್ ಕುಮಾರ್, ಪೊನ್ನಂಪೇಟೆ ಠಾಣಾಧಿಕಾರಿ ಜಿ. ನವೀನ್ ಕುಮಾರ್, ಶ್ರೀಮಂಗಲ ಠಾಣಾಧಿಕಾರಿ ರವೀಂದ್ರ , ಹಾಗೂ ಕುಟ್ಟ ಠಾಣಾಧಿಕಾರಿ ಕಾರ್ಯಪ್ಪ ಹಾಗೂ ಸಿಬ್ಬಂದಿಗಳ ಪೊನ್ನಂಪೇಟೆಯ ಮುಖ್ಯ ರಸ್ತೆಗಳಲ್ಲಿ ಪಥ ಸಂಚಲನ ನಡೆಸಿ ಸಾರ್ವಜನಿಕರಲ್ಲಿ ಧೈರ್ಯ ತುಂಬಿದರು. ಪಥಸಂಚಲಕ್ಕೆ ಚಾಲನೆ ನೀಡಿ ಮಾತನಾಡಿದ ವಿರಾಜಪೇಟೆ ಡಿವೈಎಸ್ಪಿ ಎಸ್ ಮಹೇಶ್ ಕುಮಾರ್ ಅವರು, ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಸಾರ್ವಜನಿಕರು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು.
ವರದಿ: ಚಂಪಾ ಗಗನ