ಭಾಗಮಂಡಲದ ಶ್ರೀ ಭಗಂಡೇಶ್ವರ ದೇವಾಲಯದಲ್ಲಿ ಜು.24 ರಂದು ಪೊಲಿಂಕಾನ ಉತ್ಸವ

ಮಡಿಕೇರಿ:-ಭಾಗಮಂಡಲದ ಶ್ರೀ ಭಗಂಡೇಶ್ವರ ದೇವಾಲಯದಲ್ಲಿ ರೂಢಿ ಸಂಪ್ರದಾಯದಂತೆ ವಿಶ್ವಾವಸು ಸಂವತ್ಸರದ ಗ್ರೀಷ್ಮ ಋತುವಿನ ದಕ್ಷಿಣಾಯನ ಕರ್ಕಾಟಕ ಮಾಸ ಆಪಾಢ ಕೃಷ್ಣ ಪಕ್ಷದ ಅಮಾವಾಸ್ಯೆಯಂದು ಜುಲೈ, 24 ರಂದು ಮಧ್ಯಾಹ್ನ 12 ಗಂಟೆಗೆ ಮಹಾ ಪೂಜೆಯ ನಂತರ ಶ್ರದ್ಧಾಭಕ್ತಿಯಿಂದ ಪೊಲಿಂಕಾನ ಉತ್ಸವ ನಡೆಯಲಿದೆ. ಆದ್ದರಿಂದ ಸಾರ್ವಜನಿಕ ಭಕ್ತಾಧಿಗಳು ದೇವಾಲಯಗಳಲ್ಲಿ ನಡೆಯಲಿರುವ ಪೊಲಿಂಕಾನ ಉತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಪೊಲಿಂಕಾನ ಉತ್ಸವ ಯಶಸ್ವಿಗೊಳಿಸುವಂತೆ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಎನ್.ಜಿ. ಚಂದ್ರಶೇಖರ್ ಅವರು ತಿಳಿಸಿದ್ದಾರೆ.