ಪೊನ್ನಂಪೇಟೆ:ಸ್ವಾತಂತ್ರ ದಿನಾಚರಣೆ ಕೇವಲ ಆಚರಣೆಯಾಗಿ ಅಷ್ಟೇ ಉಳಿಯಬಾರದು: ಶಾಸಕ ಎಎಸ್ ಪೊನ್ನಣ್ಣ
ಪೊನ್ನಂಪೇಟೆ:ತಾಲೂಕಿನ ಪೊನ್ನಂಪೇಟೆ ಪಟ್ಟಣದಲ್ಲಿ ಆಚರಿಸಿದ 79ನೇ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮದಲ್ಲಿ ಶಾಸಕರು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ನವರು ಭಾಗವಹಿಸಿದರು. ಧ್ವಜವಂದನೆ ನೆರವೇರಿಸಿದ ಬಳಿಕ ಮಾತನಾಡಿದ ಶಾಸಕರು, ಪೊನ್ನಂಪೇಟೆ ತಾಲೂಕಿನ ನಮ್ಮ ಹಿರಿಕರು, ಸ್ವಾತಂತ್ರ್ಯ ಪೂರ್ವ ದಿನಗಳಲ್ಲಿ, ಸ್ವಾತಂತ್ರ್ಯ ಸಂಗ್ರಾಮದಲ್ಲಿ ತಮ್ಮನ್ನು ತೊಡಗಿಸಿಕೊಂಡು ಹೋರಾಡಿದ ಪರಿ ಇಂದಿಗೆ ಇತಿಹಾಸ. ಈ ನಾಡಿನ ಪ್ರತಿಯೊಬ್ಬರ ಮನದಲ್ಲಿ ದೇಶಭಕ್ತಿ ಮನೆ ಮಾಡಿದೆ.
ದೇಶವನ್ನು ಉತ್ತಮ ದಿಸೆಯಲ್ಲಿ ಕೊಂಡೊಯ್ಯುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಸ್ವಾತಂತ್ರ ದಿನಾಚರಣೆ ಕೇವಲ ಆಚರಣೆಯಾಗಿ ಅಷ್ಟೇ ಉಳಿಯದೆ, ದೇಶವನ್ನು ಮತ್ತಷ್ಟು ಬಲಪಡಿಸುವುದರೊಂದಿಗೆ ನಿಜವಾದ ಸ್ವಾತಂತ್ರ್ಯದ ಅರ್ಥ ಕಲ್ಪಿಸುವ ದಿನ ಇಂದು ನಮ್ಮೆಲ್ಲರ ಆದ್ಯ ಕರ್ತವ್ಯ ಎಂದು ಬಣ್ಣಿಸಿದರು. ಈ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿ ಅಧ್ಯಕ್ಷರು , ಉಪಾಧ್ಯಕ್ಷರು ಹಾಗೂ ಸದಸ್ಯರುಗಳು, ತಾಲೂಕು ದಂಡಾಧಿಕಾರಿಗಳು ಹಾಗೂ ಅಧಿಕಾರಿಗಳು, ಸರಕಾರಿ ನಾಮನಿರ್ದೇಶಕ ಅಧ್ಯಕ್ಷರು ಹಾಗೂ ಸದಸ್ಯರುಗಳು, ಆಹ್ವಾನಿತ ಗಣ್ಯರು, ಪುರಸಭೆಯ ಪ್ರಮುಖರು ಹಾಗೂ ಅಪಾರ ಸಂಖ್ಯೆಯಲ್ಲಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.