Kodagu

ಪೊನ್ನಂಪೇಟೆಯಲ್ಲಿ: ಯುವಕ ಆತ್ಮಹತ್ಯೆ

admincoorgdaily

ಪೊನ್ನಂಪೇಟೆಯಲ್ಲಿ: ಯುವಕ ಆತ್ಮಹತ್ಯೆ

ಪೊನ್ನಂಪೇಟೆ:ಸಿದ್ದಾಪುರ ಸಮೀಪದ ಹುಂಡಿ ಗ್ರಾಮದ 21 ವರ್ಷದ ತ್ವಾಹ ಎಂಬ ಯುವಕ ಪೊನ್ನಂಪೇಟೆಯಲ್ಲಿನ ಮನೆಯೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಘಟನೆ ಬೆಳಕಿಗೆ ಬರುತ್ತಿದ್ದಂತೆ ಪೊನ್ನಂಪೇಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಗೋಣಿಕೊಪ್ಪ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.