ಪೊನ್ನಂಪೇಟೆ ಕ್ರಿಕೆಟ್ ಪ್ರೀಮಿಯರ್ ಲೀಗ್:ಗ್ರಾಮೀಣ ಭಾಗದ ಕ್ರೀಡಾಕೂಟಗಳಿಂದ ಯುವ ಪ್ರತಿಭೆಗಳಿಗೆ ತಮ್ಮ ಪ್ರತಿಭೆ ಪ್ರದರ್ಶಿಸಲು ಉತ್ತಮ ಅವಕಾಶ; ಶಾಸಕ ಎ‌ಎಸ್ ಪೊನ್ನಣ್ಣ

ಪೊನ್ನಂಪೇಟೆ ಕ್ರಿಕೆಟ್ ಪ್ರೀಮಿಯರ್ ಲೀಗ್:ಗ್ರಾಮೀಣ ಭಾಗದ ಕ್ರೀಡಾಕೂಟಗಳಿಂದ ಯುವ ಪ್ರತಿಭೆಗಳಿಗೆ ತಮ್ಮ ಪ್ರತಿಭೆ ಪ್ರದರ್ಶಿಸಲು ಉತ್ತಮ ಅವಕಾಶ; ಶಾಸಕ ಎ‌ಎಸ್ ಪೊನ್ನಣ್ಣ

ಪೊನ್ನಂಪೇಟೆ:ವಿರಾಜಪೇಟೆ ವಿಧಾನಸಭಾ ಕ್ಷೇತ್ರದ, ಪೊನ್ನಂಪೇಟೆಯಲ್ಲಿ ಆಯೋಜನೆಗೊಂಡ "ಪೊನ್ನಂಪೇಟೆ ಪ್ರೀಮಿಯರ್ ಲೀಗ್" ಫೈನಲ್ ಪಂದ್ಯಾವಳಿಯ ಮುಖ್ಯ ಅತಿಥಿಯಾಗಿ ಮಾನ್ಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಭಾಗವಹಿಸಿದರು.

ಫೈನಲ್ ಪಂದ್ಯದ ಪ್ರಶಸ್ತಿಯನ್ನು ವಿತರಿಸುತ್ತಾ ಮಾತನಾಡಿದ ಮಾನ್ಯ ಶಾಸಕರು, ಕ್ರೀಡೆಗೆ ಹೆಸರುವಾಸಿಯಾಗಿರುವ ಕೊಡಗಿನಲ್ಲಿ ಇಂತಹ ಕ್ರೀಡಾಕೂಟಗಳು ಆಯೋಜನೆಗೊಳ್ಳುವುದರಿಂದ ಯುವ ಪ್ರತಿಭೆಗಳಿಗೆ ತಮ್ಮ ಸಾಮರ್ಥ್ಯವನ್ನು ಅನಾವರಣಗೊಳಿಸಲು ಅವಕಾಶ ಹೆಚ್ಚಿದಂತಾಗುತ್ತದೆ. ಜೀವನದಲ್ಲಿ ಮುಂದೆ ಬರಲು ಕಠಿಣ ಪರಿಶ್ರಮ ಹಾಗೂ ಉತ್ತಮ ಅವಕಾಶ ದೊರಕುವುದು ಅತಿ ಮುಖ್ಯ. ಕ್ರೀಡೆಯಲ್ಲಿ ಆಸಕ್ತಿ ಇರುವ ಯುವಜನತೆ ಇಂತಹ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳುವಲ್ಲಿ ಕ್ರೀಡಾ ಪ್ರತಿಭೆಯನ್ನು ಅನಾವರಣಗೊಳಿಸಬೇಕು ಎಂದು ಸಲಹೆ ನೀಡಿದರು.

ಪ್ರಶಸ್ತಿ ವಿಜೇತರನ್ನು ಅಭಿನಂದಿಸುತ್ತ ಎಲ್ಲರಿಗೂ ಉತ್ತಮ ಭವಿಷ್ಯ ಲಭಿಸಲಿ ಎಂದು ಹಾರೈಸಿದರು. ಈ ಸಂದರ್ಭದಲ್ಲಿ ಕಾರ್ಯಕ್ರಮ ಆಯೋಜಕರು, ಪಟ್ಟಣ ಪಂಚಾಯಿತಿ ಉಪಾಧ್ಯಕ್ಷರು ಆಲಿರ ರಶೀದ್, ಮುಕಳೆರ ಕುಶಾಲಪ್ಪ, ಎರ್ಮು ಹಾಜಿ, ಹ್ಯಾರಿಸ್ ಮಹಾಬಲ, ಹಾಗೂ ಪ್ರಮುಖರು ಉಪಸ್ಥಿತರಿದ್ದರು.