ಪೊನ್ನಂಪೇಟೆ: ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಶಾಸಕ ಎಎಸ್ ಪೊನ್ನಣ್ಣ

ಪೊನ್ನಂಪೇಟೆ: ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಶಾಸಕ ಎಎಸ್ ಪೊನ್ನಣ್ಣ

ಪೊನ್ನಂಪೇಟೆ: ತಾಲೂಕಿನ ಶಾಸಕರ ಕಚೇರಿಯಲ್ಲಿ ಇಂದು ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಸಾರ್ವಜನಿಕರ ಅವಾಲುಗಳನ್ನು ಸ್ವೀಕರಿಸಿದರು.

 ನಿಗದಿಯಂತೆ ಶಾಸಕರು ಕಚೇರಿಗೆ ಬಂದೊಡನೆ ನೂರಾರು ಸಂಖ್ಯೆಯಲ್ಲಿ ಉಪಸ್ಥಿತರಿದ್ದ ಪಕ್ಷದ ಕಾರ್ಯಕರ್ತರು ಮುಖಂಡರು ಹಾಗೂ ಸಾರ್ವಜನಿಕರು ಶಾಸಕರಲ್ಲಿ ತಮ್ಮ ಅವಾಲುಗಳನ್ನು ಹೇಳಿಕೊಂಡು ಅಗತ್ಯ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು. ಎಲ್ಲರ ಅರ್ಜಿಗಳನ್ನು ಪರಿಶೀಲಿಸಿದ ಶಾಸಕರು ಕೆಲವರಿಗೆ ಸ್ಥಳದಲ್ಲೇ ಪರಿಹಾರ ಒದಗಿಸಿಕೊಟ್ಟರು ಹಾಗೂ ಉಳಿದ ಅರ್ಜಿಗಳನ್ನು ಆದ್ಯತೆ ಮೇರೆಗೆ ಪರಿಹರಿಸಿ ಕೊಡುವುದಾಗಿ ಭರವಸೆ ನೀಡಿದರು.