ಪೊನ್ನಂಪೇಟೆ: ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದ ಶಾಸಕ ಎಎಸ್ ಪೊನ್ನಣ್ಣ

Feb 13, 2026 - 10:30
 0  115
ಪೊನ್ನಂಪೇಟೆ: ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದ ಶಾಸಕ ಎಎಸ್ ಪೊನ್ನಣ್ಣ

ಪೊನ್ನಂಪೇಟೆ; ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಪೊನ್ನಂಪೇಟೆ ತಾಲೂಕಿನ ಪೊನ್ನಂಪೇಟೆ ಪಟ್ಟಣಕ್ಕೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಭೇಟಿ ನೀಡಿದರು.

 ಪೊನ್ನಂಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಎಂ.ಜಿ ನಗರ ಹಾಗೂ ಟಿ.ಆರ್ ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಸ್ಥಳೀಯ ಕಾಂಗ್ರೆಸ್ ಮುಖಂಡರು ಹಾಗೂ ಸಾರ್ವಜನಿಕರ ಬೇಡಿಕೆಯಂತೆ ಈ ಹಿಂದೆ ಮಾನ್ಯ ಶಾಸಕರು ಅನುದಾನ ಒದಗಿಸಿದ್ದರು. ಕೂಡಲೇ ಈ ಕಾಮಗಾರಿಯನ್ನು ಪ್ರಾರಂಭಿಸುವ ನಿಟ್ಟಿನಲ್ಲಿ ಶಾಸಕರು ಪೊನ್ನಂಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ರೂ 36ಲಕ್ಷ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ ಆದಷ್ಟು ಶೀಘ್ರದಲ್ಲಿ ಈ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚಿಸಲಾಯಿತು.

 ಈ ಸಂದರ್ಭದಲ್ಲಿ ಕೊಡಗು ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರು ಶ್ರೀ ತಿತೀರ ಧರ್ಮಜ ಉತ್ತಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಶ್ರೀ ಮಿದೇರೀರ ನವೀನ್, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರು ಕಾಳಿಮಾಡ ಪ್ರಶಾಂತ್, ಹಿರಿಯರು ಮುಕಳೇರ ಕುಶಾಲಪ್ಪ,ಪೊನ್ನಂಪೇಟೆ ಪಟ್ಟಣ ಪಂಚಾಯಿತಿ ಅಧ್ಯಕ್ಷರು ಅಣ್ಣೀರ ಹರೀಶ್, ಉಪಾಧ್ಯಕ್ಷರು ಆಲೀರ ರಶೀದ್, ತಾಲೂಕು ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರು ಜುನೈದ್, ಪಟ್ಟಣ ಪಂಚಾಯಿತಿ ಸದಸ್ಯರುಗಳು ಕೊಳೇರ ಭಾರತಿ, ಮುಕಳೇರ ಸುನಿತಾ, ರಾಶಿಕಾ, ಶಾಜಿ ಅಚ್ಚುತನ್, ಅಜ್ಜಿಕುಟ್ಟಿರ ಪೊನ್ನು, ಅಣ್ಣಳ್ಳಮಾಡ ಹರೀಶ್, ಪೂವಣ್ಣ, ಕುಂಡಚ್ಚಿರ ಮಂಜು ದೇವಯ್ಯ, ಭವಿನ್, ಅಯೂಬ್ ಹಾಗೂ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.

What's Your Reaction?

Like Like 0
Dislike Dislike 0
Love Love 0
Funny Funny 1
Angry Angry 0
Sad Sad 0
Wow Wow 0