ಪೊನ್ನಂಪೇಟೆ:ಹಿರಿಯ ನಾಗರಿಕ ವೇದಿಕೆ ಆಯೋಜಿಸಿದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಶಾಸಕ ಎಎಸ್ ಪೊನ್ನಣ್ಣ

ಪೊನ್ನಂಪೇಟೆ:ಕಿಗ್ಗಟ್ ನಾಡ್ ಹಿರಿಯ ನಾಗರಿಕ ವೇದಿಕೆ ವತಿಯಿಂದ ಆಯೋಜಿಸಿದ ಕಾರ್ಯಕ್ರಮದಲ್ಲಿ, ಇಂದು ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಭಾಗವಹಿಸಿದರು.
ಪೊನ್ನಂಪೇಟೆಯಲ್ಲಿ ಆಯೋಜನೆಗೊಂಡ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕರು, ಕಿಗ್ಗಟ್ ನಾಡ್ ಹಿರಿಯ ನಾಗರಿಕ ವೇದಿಕೆಯು ಬಹುಕಾಲದಿಂದ ಹಿರಿಯ ನಾಗರಿಕರ ಬೇಡಿಕೆಗಳಿಗೆ ಸಮಾಧಾನ ಕಂಡುಕೊಳ್ಳುವ ನಿಟ್ಟಿನಲ್ಲಿ ಹಲವು ಕಾರ್ಯಕ್ರಮಗಳನ್ನು ಆಯೋಜಿಸಿ ಉತ್ತಮ ನಿದರ್ಶನ ಹೊಂದಿದೆ. ಇಲ್ಲಿಯ ಅನೇಕರು ಹಲವು ಸ್ತರಗಳ ಉನ್ನತ ಸಲಹೆಗಳನ್ನು ನೀಡುವುದರೊಂದಿಗೆ ಸಮಾಜಕ್ಕೆ ಉತ್ತಮ ಕೊಡುಗೆ ನೀಡುತ್ತಿದ್ದಾರೆ. ಎಲ್ಲರ ಮಾರ್ಗದರ್ಶನ, ಉತ್ತಮ ಸಮಾಜ ನಿರ್ಮಾಣಕ್ಕೆ ಅವಶ್ಯಕತೆ ಇದ್ದು ತಾನು ಇಂತಹ ಎಲ್ಲಾ ವಿಷಯಗಳನ್ನು ಮನಸಾರೆ ಸ್ವಾಗತಿಸುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯರು ಅರುಣ್ ಮಾಚಯ್ಯ, ಕಿಗ್ಗಟ್ ನಾಡ್ ಹಿರಿಯ ನಾಗರಿಕ ವೇದಿಕೆಯ ಅಧ್ಯಕ್ಷರಾದ ಕೊಟ್ಟುಕುತ್ತೀರ ಪಿ ಸೋಮಣ್ಣ, ಪದಾಧಿಕಾರಿಗಳು, ಕಟ್ಟಿಮಾಡ ಜಿಮಿ ಅಣ್ಣಯ್ಯ, ಮುಕಳೇರ ಕುಶಾಲಪ್ಪ, ಹಿರಿಯ ನಾಗರಿಕರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.