ಪೊನ್ನಂಪೇಟೆ ತಾಲ್ಲೂಕು ಗ್ಯಾರಂಟಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆ

Dec 24, 2025 - 16:41
 0  307
ಪೊನ್ನಂಪೇಟೆ ತಾಲ್ಲೂಕು ಗ್ಯಾರಂಟಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆ

ಮಡಿಕೇರಿ: ವಿರಾಜಪೇಟೆ ತಾಲ್ಲೂಕು ಪಂಚಾಯಿತಿ ಸಾಮರ್ಥ್ಯಸೌಧದಲ್ಲಿ ಪೊನ್ನಂಪೇಟೆ ತಾಲ್ಲೂಕು ಗ್ಯಾರಂಟಿ ಅನುಷ್ಥಾನ ಸಮಿತಿ ಪ್ರಗತಿ ಪರಿಶೀಲನಾ ಸಭೆಯು ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅಧ್ಯಕ್ಷರಾದ ಪ್ರಶಾಂತ್ ರವರ ಅಧ್ಯಕ್ಷತೆಯಲ್ಲಿ ಜರುಗಿತು.

 ಸಭೆಯಲ್ಲಿ ಪ್ರಮುಖವಾಗಿ ಚೆಸ್ಕಾಂ ಇಲಾಖೆ ಬಗ್ಗೆ ಚರ್ಚಿಸಿ ಇಲಾಖೆಯಿಂದ ಹಲವಾರು ಕಾಮಗಾರಿಗಳು ಪೂರ್ಣಗೊಂಡಿದ್ದು ಉತ್ತಮವಾಗಿ ಕೆಲಸ ನಿರ್ವಹಿಸಿದ್ದಾರೆ ಎಂದು ಸಭೆಯಲ್ಲಿ ಸರ್ವಸದಸ್ಯರು ಅಭಿಪ್ರಾಯ ವ್ಯಕ್ತಪಡಿಸಿದರು. ಪೊನ್ನಂಪೇಟೆ ತಾಲ್ಲೂಕಿಗೆ 151.97 ಅನುದಾನ ಬಿಡುಗಡೆಯಾಗಿದ್ದು 56 ಕೋಟಿ ರೂ.ವೆಚ್ಚದ ಕಾಮಗಾರಿಗಳು ತಾಲ್ಲೂಕಿನಲ್ಲಿ ಪೂರ್ಣಗೊಂಡಿದೆ ಎಂದು ಸಭೆಗೆ ಚೆಸ್ಕಾಂ‌ ಅಧಿಕಾರಿಯವರು ಮಾಹಿತಿ ನೀಡಿದರು.ತಾಲ್ಲೂಕಿನಲ್ಲಿ 99.26 ರಷ್ಟು ಗೃಹ ಜ್ಯೋತಿ ಯೋಜನೆಯನ್ನು ಸದುಪಯೋಗಪಡಿಸಿಕೊಂಡಿದ್ದಾರೆ ಸಭೆಗೆ ತಿಳಿಸಿದರು.

ವರ್ಷದ ಅಂತ್ಯದ ಒಳಗಾಗಿ ಎಲ್ಲಾ ವಿದ್ಯುತ್ ಸಂಬಂಧಿತ ಕಾಮಗಾರಿಗಳು ಪೂರ್ಣಗೊಳಿಸಲು ಕ್ರಮವಹಿ ಎಂದು ಚೆಸ್ಕಾಂ‌ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದರು. ಅನ್ನಭಾಗ್ಯ-" ಕಾಳಸಂತೆಯಲ್ಲಿ" ಅಕ್ಕಿ ಮಾರಟವಾಗುವುದನ್ನು ತಡೆಗಟ್ಟಲು ಸೂಚನಾ ನಾಮಫಲಗಳನ್ನು ನ್ಯಾಯಬೆಲೆ ಅಂಗಡಿಗಳಲ್ಲಿ ಅಳವಡಿಸುತ್ತಿಲ್ಲ ಕಡ್ಡಾಯವಾಗಿ ಅಳವಡಿಸಲು ಕ್ರಮವಹಿಸಿ ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ನೋಡಿಕೊಳ್ಳಲು ತಿಳಿಸಿದರು.

ಮಾರ್ಚ್ ತಿಂಗಳಲ್ಲಿ ಜಾಗೃತಿ ಅಭಿಯಾನವನ್ನು ಹಮ್ಮಿಕೊಳ್ಳಲು ಸಭೆಯಲ್ಲಿ ಚರ್ಚಿಸಲಾಯಿತು. ಗೃಹ ಲಕ್ಷ್ಮಿ- ಗೃಹ ಲಕ್ಷ್ಮಿ ಹಣವು ಆಗಸ್ಟ್ ವರೆಗೆ ಮಾತ್ರ ‌ಜನರ ಖಾತೆಗೆ ಜಮೆಯಾಗಿರುತ್ತದೆ, ಬಾಕಿ ಇರುವ ಹಣವು ಮುಂದಿನ ದಿನಗಳಲ್ಲಿ ಜಮೆಯಾಗುತ್ತದೆ ಎಂದು ಸಂಬಂಧಪಟ್ಟ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

ಯುವನಿಧಿ ಯೋಜನೆಯಡಿ ತಾಲ್ಲೂಕಿನ ವ್ಯಾಪ್ತಿಯಲ್ಲಿ ಉದ್ಯೋಗ ಮೇಳವನ್ನು ಕೈಗೊಳ್ಳಲು ಕ್ರಮವಹಿಸಿ ವಿದ್ಯಾರ್ಥಿಗಳಿಗೆ ಉದ್ಯೋಗವಕಾಶವನ್ನು ಕಲ್ಪಿಸಿಕೊಡಲು ಶ್ರಮಿಸಿ ಎಂದು ಉದ್ಯೋಗ ವಿನಿಮಯ ಅಧಿಕಾರಿಗಳಿಗೆ ಇದೇ ಸಂರ್ಧದಲ್ಲಿ ತಿಳಿಸಲಾಯಿತು. ಸಭೆಯಲ್ಲಿ ವಿ.ಪೇಟೆ ತಾ.ಪಂ.ಕಾರ್ಯನಿರ್ವಾಹಕ ಅಧಿಕಾರಿಗಳಾದ ಕೆ.ಸಿ.ಅಪ್ಪಣ್ಣ, ಗ್ಯಾರಂಟಿ ಯೋಜನೆಯ ಸದಸ್ಯರು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು‌

What's Your Reaction?

Like Like 1
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0