ಪೊನ್ನಂಪೇಟೆ ತಾಲ್ಲೂಕು ಗ್ಯಾರಂಟಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆ

Jan 22, 2026 - 17:36
 0  304
ಪೊನ್ನಂಪೇಟೆ ತಾಲ್ಲೂಕು ಗ್ಯಾರಂಟಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆ

ಮಡಿಕೇರಿ:-ವಿರಾಜಪೇಟೆ ತಾಲ್ಲೂಕು ಪಂಚಾಯಿತಿ ಸಾಮಥ್ರ್ಯಸೌಧದಲ್ಲಿ ಪೊನ್ನಂಪೇಟೆ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಪ್ರಗತಿ ಪರಿಶೀಲನಾ ಸಭೆಯು ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅಧ್ಯಕ್ಷರಾದ ಪ್ರಶಾಂತ್ ಅವರ ಅಧ್ಯಕ್ಷತೆಯಲ್ಲಿ ಬುಧವಾರ ಜರುಗಿತು.

ತಾಲ್ಲೂಕಿನ ವ್ಯಾಪ್ತಿಯಲ್ಲಿ ಗೃಹ ಲಕ್ಷ್ಮಿಯೋಜನೆಯಲ್ಲಿ ಒಟ್ಟು 1.17 ಫಲಾನುಭವಿಗಳಿಗೆ ಸೆಪ್ಟೆಂಬರ್ ತಿಂಗಳವರೆಗೆ ಗೃಹ ಲಕ್ಷ್ಮಿ ಹಣ ಪಾವತಿಯಾಗಿದ್ದು ಇನ್ನೂ 5 ತಿಂಗಳು ಬಾಕಿ ಇದ್ದು ಮುಂದಿನ ದಿನಗಳಲ್ಲಿ ಬಿಡುಗಡೆಯಾಗಲಿದೆ ಎಂದು ಸಂಬಂಧಪಟ್ಟ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು. ಗೃಹ ಲಕ್ಷ್ಮಿ ಯೋಜನೆಯಡಿ ಸೆಪ್ಟೆಂಬರ್ ತಿಂಗಳವರೆಗೆ 720 ಹೊಸ ಫಲಾನುಭವಿಗಳು ಹೆಸರು ನೋದಾಯಿಸಿಕೊಂಡಿದ್ದು ಯೋಜನೆಯ ಸದುಪಯೋಗವನ್ನು ಪಡೆದುಕೊಳ್ಳುತ್ತಿದ್ದು, ಐಟಿ ಮತ್ತು ಜಿಎಸ್‍ಟಿ ಪಾವತಿ ಮಾಡುತ್ತಿರುವ ಫಲನುಭವಿಗಳಲ್ಲಿ ಕೆಲವು ತಾಂತ್ರಿಕ ದೋಷಗಳು ಕಂಡುಬರುತ್ತಿದ್ದು, ಈ ಬಗ್ಗೆ ಸರ್ಕಾರದ ಗಮನ ತಂದು ಸಮಸ್ಯೆ ಬಗೆಹರಿಸಲು ಸಭೆಯಲ್ಲಿ ಚರ್ಚಿಸಲಾಯಿತು.

ಸರ್ಕಾರ ಹೊಸದಾಗಿ ಮಹಿಳೆಯರಿಗಾಗಿ ಗೃಹ ಲಕ್ಷ್ಮಿ ವಿವಿದ್ದೋದ್ದೇಶ ಸಹಕಾರ ಸಂಘವನ್ನು ರಚನೆ ಮಾಡಿದ್ದು ಮೊದಲ ಹಂತದಲ್ಲಿ ಈಗಾಗಲೇ ತಾಲ್ಲೂಕಿನಲ್ಲಿ ಫಲಾನುಭವಿಗಳನ್ನು ಆಯ್ಕೆ ಮಾಡಿದ್ದು, 1250 ರೂ.ಗಳನ್ನು ಪಾವತಿ ಮಾಡಿ ನೋಂದಾಯಿಸಿಕೊಳ್ಳುವ ಮೂಲಕ ಮಹಿಳೆಯರಿಗೆ 3 ಸಾವಿರದಿಂದ 3 ಲಕ್ಷದವರೆಗೂ ಸಾಲ ಸೌಲಭ್ಯ ಪಡೆದುಕೊಳ್ಳಬಹುದಾಗಿದೆ ಎಂದು ಸಂಬಂಧಪಟ್ಟ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

ಅನ್ನಭಾಗ್ಯ ಯೋಜನೆಯಡಿ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿದ ಫಲನುಭವಿಗಳಿಗೆ ಪಡಿತರ ಚೀಟಿಗಳನ್ನು ಪಡೆದುಕೊಳ್ಳುವ ಅವಕಾಶ ಕಲ್ಪಿಸಲಾಗಿದೆ ಅರ್ಜಿ ಸಲ್ಲಿಸಿದ ಫಲಾನುಭವಿಗಳು ಸದುಪಯೋಗವನ್ನು ಪಡೆದುಕೊಳ್ಳಲು ಸಭೆಯಲ್ಲಿ ಆಹಾರ ನಿರೀಕ್ಷಕರು ಮಾಹಿತಿ ನೀಡಿದರು.

 ತೆರಿಗೆದಾರರು, ಪಿಎಂ ಕಿಸಾನ್ ಕಾರ್ಡ್ ಹೊಂದಿರುವವರ ಆದಾಯ ಪ್ರಮಾಣಪತ್ರಗಳನ್ನು ಪರಿಶೀಲಿಸಿ ಬದಲಾವಣೆ ಮಾಡಲಾಗುತ್ತಿದ್ದು, ಕೆಲವೊಂದು ತಪ್ಪಾಗಿ ಪಟ್ಟಿಯಲ್ಲಿ ಬಡವರಿಗೂ ಬಿಪಿಎಲ್ ಕಾರ್ಡ್ ನಿಂದ ಎಪಿಎಲ್ ಕಾರ್ಡ್ ಗಳಾಗಿ ಪರಿವರ್ತಿಸಲು ಬಂದಿದ್ದು ಇಂತಹ ಸಮಸ್ಯೆಗಳನ್ನು ಬಗೆಹರಿಸಲು ಸಭೆಯಲ್ಲಿ ಕೋರಲಾಯಿತು. ಸಭೆಯಲ್ಲಿ ಶಕ್ತಿ ಯೋಜನೆ, ಗೃಹಜ್ಯೋತಿ, ಯುವ ನಿಧಿ ಯೋಜನೆಗಳ ಕುರಿತು ಚರ್ಚಿಸಲಾಯಿತು. ಸಭೆಯಲ್ಲಿ ವಿರಾಜಪೇಟೆ ತಾ.ಪಂ.ಇಒ ಕೆ.ಸಿ.ಅಪ್ಪಣ್ಣ, ಗ್ಯಾರಂಟಿ ಯೋಜನೆಯ ಸದಸ್ಯರು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

What's Your Reaction?

Like Like 1
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0