ಪೊನ್ನಂಪೇಟೆ ತಾಲ್ಲೂಕು ಗ್ಯಾರಂಟಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆ
ಮಡಿಕೇರಿ ಆ.05:-ಪೊನ್ನಂಪೇಟೆ ತಾಲ್ಲೂಕು ಪಂಚಾಯಿತಿ ಸಾಮಥ್ರ್ಯಸೌಧದಲ್ಲಿ ಪೊನ್ನಂಪೇಟೆ ತಾಲ್ಲೂಕು ಗ್ಯಾರಂಟಿ ಅನುಷ್ಟಾನ ಸಮಿತಿ ಪ್ರಗತಿ ಪರಿಶೀಲನಾ ಸಭೆಯು ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅಧ್ಯಕ್ಷರಾದ ಪ್ರಶಾಂತ್ ರವರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ಜರುಗಿತು.
ಯುವ ನಿಧಿ-ಯುವ ನಿಧಿ ಯೋಜನೆ ಕುರಿತು ಹೆಚ್ಚಿನ ಪ್ರಚಾರವಾಗಬೇಕು. ಪದವಿ ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ದೂರವಾಣಿ ಮೂಲಕ ಸಂಪರ್ಕ ಮಾಡಿ ಯೋಜನೆಯ ಉಪಯೋಗವನ್ನು ಮಾಡಿಕೊಳ್ಳಲು ತಿಳಿಸಲು ಸಭೆಯಲ್ಲಿ ಚರ್ಚಿಸಲಾಯಿತು. ಯಾರೆಲ್ಲಾ ಯುವ ನಿಧಿ ಯೋಜನೆಯಡಿ ಅರ್ಹರಾಗಿರುತ್ತಾರೆ ಎಂಬುದನ್ನು ಸಭೆಯಲ್ಲಿ ಉದ್ಯೋಗ ವಿನಿಮಯಾಧಿಕಾರಿಗಳು ಮಾಹಿತಿ ನೀಡಿದರು.
2024-25 ರಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಾಗಿರಬೇಕು (ಪದವಿ-3000, ಡಿಪ್ಲೋಮ -1500.) ಸ್ನಾತಕೋತ್ತರ ಪದವಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ರೂ.3 ಸಾವಿರ ಪ್ರೋತ್ಸಾಹ ಧನ ನೀಡಲಾಗುತ್ತಿದೆ. ಎಲ್ಲಾ ಕಾಲೇಜುಗಳಿಗೆ ನಿರಂತರವಾಗಿ ಭೇಟಿ ನೀಡಿ ವಿದ್ಯಾರ್ಥಿಗಳ ಮಾಹಿತಿ ಕಲೆ ಹಾಕಿ ಇದರಿಂದ ಯೋಜನೆಯ ಸದುಪಯೋಗವಾಗುತ್ತದೆ. ರೇಡಿಯೋ ಪತ್ರಿಕೆ ಹಾಗೂ ದೃಶ್ಯಮಾಧ್ಯಮಗಳಲ್ಲಿ ಯೋಜನೆಯ ಕುರಿತು ಜಾಹೀರಾತು ನೀಡಲು ಪೆÇನ್ನಂಪೇಟೆ ತಾ.ಪಂ.ಗ್ಯಾರಂಟಿ ಅಧ್ಯಕ್ಷರಾದ ಪ್ರಶಾಂತ್ ಅವರು ತಿಳಿಸಿದರು.
ಅನ್ನಭಾಗ್ಯ: ಪೊನ್ನಂಪೇಟೆ ತಾಲ್ಲೂಕಿನಲ್ಲಿ ನ್ಯಾಯಬೆಲೆ ಅಂಗಡಿಯಲ್ಲಿ ಎಸ್.ಸಿ/ ಎಸ್.ಟಿ ಗಳ ಜಾತಿ ಪ್ರಮಾಣ ಪತ್ರವನ್ನು ರೇಷನ್ ಕಾರ್ಡ್‍ಗೆ ಲಿಂಕ್ ಮಾಡುವ ಕಾರ್ಯ ನಡೆಯುತ್ತಿದ್ದು, ರೇಷನ್ ಕಾರ್ಡ್ ಹೊಂದಿರುವವರು ಎಲ್ಲರೂ ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.
ಕಾಳಸಂತೆಯಲ್ಲಿ ಪಡಿತರ ಅಕ್ಕಿ ಮಾರಾಟ ಮಾಡುವುದು ಕಂಡುಬಂದಲ್ಲಿ ಅಂತವರ ಪಡಿತರ ಚೀಟಿ ರದ್ದುಗೊಳಿಸಲಾಗುವುದು ಎಂದು ಸಂಬಂಧಪಟ್ಟ ಅಧಿಕಾರಿಗಳು ಮಾಹಿತಿ ನೀಡಿದರು.
ಶಕ್ತಿ ಯೋಜನೆ: ಶಾಲಾ ಮಕ್ಕಳಿಗೆ ಪ್ರತಿ ಶನಿವಾರ ಅರ್ಧ ದಿನವಾಗಿದ್ದು, ಅದ್ದರಿಂದ ಅಂತಹ ಸಮಯದಲ್ಲಿ ಮಕ್ಕಳಿಗೆ ಬಸ್ಸುಗಳ ಸಮಸ್ಯೆಯಾಗುತ್ತಿದ್ದು ಈ ಸಮಸ್ಯೆಯನ್ನು ಬಗೆಹರಿಸಲು ಸಭೆಯಲ್ಲಿ ಚರ್ಚಿಸಲಾಯಿತು. ಗೋಣಿಕೊಪ್ಪಲು ಬಸ್ಸು ನಿಲ್ದಾಣದಲ್ಲಿ ಕೆಎಸ್‍ಆರ್‍ಟಿಸಿ ಬಸ್ಸುಗಳನ್ನು ನಿಲ್ಲಿಸಲು ಅವಕಾಶ ಕಲ್ಪಿಸಿಕೊಡಲು ಸಭೆಯಲ್ಲಿ ಕೋರಲಾಯಿತು.
ಖಾಸಗಿ ಬಸ್ಸುಗಳ ಮಾಲೀಕರಿಂದ ಬಸ್ಸುಗಳನ್ನು ನಿಲ್ಲಿಸಲು ಅವಕಾಶ ನಿಡುತ್ತಿಲ್ಲ ಈ ಸಮಸ್ಯೆಯನ್ನು ಬಗೆಹರಿಸಿಕೊಡಲು ಕೆಎಸ್‍ಆರ್‍ಟಿಸಿ ಅಧಿಕಾರಿಗಳು ಕೋರಿದರು.
ಸಭೆಯಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಹಾಗೂ ಹಲವು ವಿಚಾರಗಳ ಬಗ್ಗೆ ಚರ್ಚಿಸಲಾಯಿತು. ಸಭೆಯಲ್ಲಿ ವಿರಾಜಪೇಟೆ ತಾ.ಪಂ.ಇಒ ರಾಜೇಶ್, ಗ್ಯಾರಂಟಿ ಯೋಜನೆಯ ಸದಸ್ಯರು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0
