ಪೊನ್ನಂಪೇಟೆ: ಕುರ್ಚಿ ಗ್ರಾಮದಲ್ಲಿ ತಾತ್ಕಾಲಿಕ ಶೆಡ್ ನಿರ್ಮಿಸಿ ವಾಸ ಮಾಡುತ್ತಿರುವ ಪ.ಪಂ ನಿವಾಸಿಗಳನ್ನು ಒಕ್ಕಲೆಬ್ಬಿಸಿದ್ದಲ್ಲಿ ಹೋರಾಟದ ಎಚ್ಚರಿಕೆ

ಪೊನ್ನಂಪೇಟೆ: ಕುರ್ಚಿ ಗ್ರಾಮದಲ್ಲಿ ತಾತ್ಕಾಲಿಕ ಶೆಡ್ ನಿರ್ಮಿಸಿ ವಾಸ ಮಾಡುತ್ತಿರುವ ಪ.ಪಂ ನಿವಾಸಿಗಳನ್ನು ಒಕ್ಕಲೆಬ್ಬಿಸಿದ್ದಲ್ಲಿ ಹೋರಾಟದ ಎಚ್ಚರಿಕೆ

ಮಡಿಕೇರಿ: ಕುರ್ಚಿ ಗ್ರಾಮ ಮತ್ತು ಸರ್ವೆ ನಂ 74/1 ರಲ್ಲಿ ತಾತ್ಕಾಲಿಕ ಶೆಡ್ ನಿರ್ಮಿಸಿ ವಾಸ ಮಾಡುತ್ತಿರುವ ಪರಿಶಿಷ್ಟ ಪಂಗಡ ನಿವಾಸಿಗಳನ್ನು ಒಕ್ಕಲೆಬ್ಬಿಸಿದ್ದಲ್ಲಿ ದಲಿತ ಸಂಘರ್ಷ ಸಮಿತಿಯಿಂದ ಪ್ರತಿಭಟನೆ ನಡೆಸಲಾಗುವುದು ಎಂದು ಸಮಿತಿಯ ಕೊಡಗು, ಮೈಸೂರು ವಿಭಾಗೀಯ ಸಂಚಾಲಕ ಎನ್.ವೀರಭದ್ರಯ್ಯ ಎಚ್ಚರಿಸಿದರು.

ಜಿಲ್ಲೆಯಲ್ಲಿ ಪರಿಶಿಷ್ಟ ಪಂಗಡ ನಿವಾಸಿಗಳು ಲೈನ್‌ಮನೆಗಳಲ್ಲಿ ವಾಸ ಮಾಡುತ್ತಿದ್ದಾರೆ. ಸೂರು ಕಲ್ಪಿಸುವಲ್ಲಿ ಆಡಳಿತ ವರ್ಗ ವಿಫಲವಾಗಿದೆ. ಇದರ ನಡುವೆ ಪೊನ್ನಂಪೇಟೆ ತಾಲೂಕಿನ ತಹಶೀಲ್ದಾರ್ ಮತ್ತು ಐಟಿಡಿಪಿ ಅಧಿಕಾರಿಗಳು ಒಕ್ಕಲೆಬ್ಬಿಸುವ ದೃಷ್ಠಿಯಿಂದ ಪರಿಶಿಷ್ಟ ಪಂಗಡ ನಿವಾಸಿಗಳನ್ನು ಮನವೊಲಿಸುವ ಕೆಲಸಗಳನ್ನು ಮಾಡುತ್ತಿದ್ದಾರೆ ಎಂದು ಆರೋಪಿಸಿದ ಅವರು, ಪೊನ್ನಂಪೇಟೆ ತಾಲೂಕಿನಲ್ಲಿ ಐಟಿಡಿಪಿ ಪರಿಶಿಷ್ಟ ವರ್ಗದ ಕಲ್ಯಾಣಾಧಿಕಾರಿಗಳ ಹೆಸರಿನಲ್ಲಿ ಸರ್ಕಾರಿ ಜಾಗವಿದ್ದರೂ ಪರಿಶಿಷ್ಟ ಪಂಗಡ ನಿವಾಸಿಗಳಿಗೆ ನಿವೇಶನ ಕಲ್ಪಿಸಲು ಹಿಂದೇಟು ಹಾಕುತ್ತಿದ್ದಾರೆ. ಆದ್ದರಿಂದ ಇಬ್ಬರು ಅಧಿಕಾರಿಗಳನ್ನು ವರ್ಗಾವಣೆ ಮಾಡಬೇಕು ಎಂದು ಆಗ್ರಹಿಸಿದರು.

 ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಸಮಿತಿ ಜಿಲ್ಲಾ ಸಂಚಾಲಕ ಎಚ್.ಎಲ್.ದಿವಾಕರ್, ಪೊನ್ನಂಪೇಟೆ ತಾಲೂಕು ಸಂಚಾಲಕ ಎಚ್.ಆರ್.ಜಗದೀಶ್, ಪ್ರಮುಖರಾದ ಎಚ್.ಕೆ.ಗಣೇಶ್, ಪಿ.ಕೆ.ಮಣಿ, ವೈ.ಕೆ.ರವಿ ಇದ್ದರು.