Kodagu

ಪೊನ್ನಂಪೇಟೆ:ವಿದ್ಯುತ್ ತಂತಿ ಸ್ಪರ್ಶಿಸಿ ಕಾಡಾನೆ ಸಾವು

admincoorgdaily

ಪೊನ್ನಂಪೇಟೆ:ವಿದ್ಯುತ್ ತಂತಿ ಸ್ಪರ್ಶಿಸಿ ಕಾಡಾನೆ ಸಾವು

ಪೊನ್ನಂಪೇಟೆ:ತಾಲೂಕಿನ ಮಡಿಕೆಬೀಡು ಭಾಗದಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ಗಂಡು ಕಾಡಾನೆಯೊಂದು ಮೃತಪಟ್ಟಿರುವ ಘಟನೆ ಆ.4 ರ ಮಂಗಳವಾರ ರಾತ್ರಿನಡೆದಿದೆ. ಮಾಯಾಮುಡಿಯ ಆಪ್ಪಟ್ಟೀರ ಬೇಬಿ ಎಂಬುವರ ತೋಟದಲ್ಲಿ ಈ ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.

 ರಾತ್ರಿ ವೇಳೆ ಆನೆ ಕರೆಂಟ್ ತಂತಿಯನ್ನು ಸ್ಪರ್ಶಿಸಿದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಘಟನೆಯ ಮಾಹಿತಿ ತಿಳಿದ ತಕ್ಷಣ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆ ಬಳಿಕ ಸಾವಿಗೆ ನಿಖರ ಕಾರಣ ತಿಳಿಯಲಿದೆ.