ಪೊನ್ನಂಪೇಟೆ: ಕೆರೆಗೆ ಹಾರಿ ಮಹಿಳೆ ಆತ್ಮಹತ್ಯೆ

Nov 24, 2025 - 14:38
 0  2.2k
ಪೊನ್ನಂಪೇಟೆ: ಕೆರೆಗೆ ಹಾರಿ ಮಹಿಳೆ ಆತ್ಮಹತ್ಯೆ
ಸಾಂದರ್ಭಿಕ ಚಿತ್ರ

ಪೊನ್ನಂಪೇಟೆ: ಕೆರೆಗೆ ಹಾರಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪೊನ್ನಂಪೇಟೆ ತಾಲೂಕಿನ ಬಲ್ಯಮುಂಡೂರು ಗ್ರಾ.ಪಂ.ವ್ಯಾಪ್ತಿಯ ತೂಚಮಕೇರಿಯಲ್ಲಿ ನಡೆದಿದೆ. ತೂಚಮಕೇರಿಯ ಮೂಕಳಮಾಡ ಸುರೇಶ್ ಎಂಬುವರ ಪತ್ನಿ ಸುಮಿತಾ (48) ಎಂಬುವರೇ ಆತ್ಮಹತ್ಯೆಗೆ ಶರಣಾದ ದುರ್ದೈವಿ.

ಸೋಮವಾರ ಬೆಳಗ್ಗೆ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಳೆದೆರಡು ತಿಂಗಳ ಹಿಂದೆ ತಮ್ಮ ಪುತ್ರನಿಗೆ ಅಪಘಾತ ಸಂಭವಿಸಿದ ಹಿನ್ನೆಲೆಯಲ್ಲಿ ಸುಮಿತಾ ಅವರು ಮಾನಸಿಕವಾಗಿ ನೊಂದಿದ್ದರು ಎನ್ನಲಾಗಿದೆ.ಈ ಹಿನ್ನೆಲೆಯಲ್ಲಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಶ್ರೀಮಂಗಲ ಠಾಣಾಧಿಕಾರಿ ಎ.ಎಸ್.ರವೀಂದ್ರ ಭೇಟಿ, ಪರಿಶೀಲನೆ ನಡೆಸಿದ್ದಾರೆ.

What's Your Reaction?

Like Like 2
Dislike Dislike 1
Love Love 1
Funny Funny 0
Angry Angry 0
Sad Sad 7
Wow Wow 0