ಪೊನ್ನಂಪೇಟೆ:ತಾಲ್ಲೂಕು ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಸಭೆಯಲ್ಲಿ ಭಾಗವಹಿಸಿದ ಶಾಸಕ ಎಎಸ್ ಪೊನ್ನಣ್ಣ

ಪೊನ್ನಂಪೇಟೆ:ತಾಲ್ಲೂಕು ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಸಭೆಯಲ್ಲಿ ಭಾಗವಹಿಸಿದ ಶಾಸಕ ಎಎಸ್ ಪೊನ್ನಣ್ಣ

ಪೊನ್ನಂಪೇಟೆ:ತಾಲೂಕಿನಲ್ಲಿ ಆಯೋಜಿಸಿದ, ತಾಲೂಕು ಯೋಜನೆ ಮತ್ತು ಅಭಿವೃದ್ಧಿ ಸಮಿತಿಯಲ್ಲಿ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಭಾಗವಹಿಸಿದರು. ತಾಲೂಕು ಪಂಚಾಯತ್ ಸಾಮರ್ಥ್ಯ ಸೌಧ ಸಭಾಂಗಣದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ, ಸಮಿತಿಯ ಅಧ್ಯಕ್ಷರೂ ಆಗಿರುವ ಶಾಸಕರು ಸಮಿತಿಯ ಸದಸ್ಯರೊಂದಿಗೆ ಹಲವು ವಿಷಯಗಳ ಕುರಿತು ಚರ್ಚಿಸಿದರು.

ಯೋಜನೆ ಮತ್ತು ಅಭಿವೃದ್ಧಿ ಸಮಿತಿಯ ಜವಾಬ್ದಾರಿಗಳನ್ನು ಹಾಗೂ ನಿಭಾಯಿಸಬೇಕಾದ ಕಾರ್ಯಕ್ರಮಗಳನ್ನು ಮತ್ತು ರೂಪಿಸಬೇಕಾದ ವಿಷಯಗಳ ಬಗ್ಗೆ ವಿಶೇಷ ಮಾಹಿತಿಯನ್ನು ಸಭೆಗೆ ತಿಳಿಸಿದರು.

 ಈ ಸಭೆಯ ವೇದಿಕೆಯಲ್ಲಿ ವಿಧಾನ ಪರಿಷತ್ ಸದಸ್ಯರಾದ ಸುಜಾ ಕುಶಾಲಪ್ಪ, ವೈಸ್ ಚೇರ್ ಪರ್ಸನ್ ಬಾಲಚಂದ್ರ ನಾಯರ್, ಹಾಗೂ ಸಮಿತಿಯ ಪದಾಧಿಕಾರಿಗಳದ ಕೊಲ್ಲಿರ ಬೋಪಣ್ಣ, ಅಣ್ಣೀರ ಹರೀಶ್, ಪಂದಿಕಂಡ ದಿನೇಶ್ ಕುಶ, ತಾಲೂಕು ಪಂಚಾಯಿತಿಯ ಕಾರ್ಯನಿರ್ವಾಹಕ ಅಧಿಕಾರಿಗಳು ವಿವಿಧ ಗ್ರಾಮ ಪಂಚಾಯಿತಿಯ ಅಧ್ಯಕ್ಷರುಗಳು, ಹಾಗೂ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.