ಹಂಡ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಿತ್ತೂರು ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಅಭಿಯಾನ್ ಕಾರ್ಯಕ್ರಮ

ಶನಿವಾರಸಂತೆ : ಆರೋಗ್ಯಕ್ಕೆ ಪೌಷ್ಟಿಕ ಆಹಾರ ಸೇವನೆ ಪ್ರಮುಖಕವಾದದ್ದಾಗಿದೆ ಇದರಿಂದ ಸದೃಢವಾದ ಆರೋಗ್ಯ ಪಡೆಯಬಹುದೆಂದು ಹಂಡ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಧಾ ಈರೇಶ್ ಹೇಳಿದರು. ಸಮೀಪದ ಹಂಡ್ಲಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಿತ್ತೂರು ಅಂಗನವಾಡಿ ಕೇಂದ್ರದಲ್ಲಿ ಏರ್ಪಡಿಸಿದ ಪೋಷಣ್ ಅಭಿಯಾನ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಅವರು ಮಾತನಾಡಿದರು.
ಗರ್ಭಿಣಿ ತಾಯಿ ಮತ್ತು ಮಗುವಿಗೆ ತೊಂದರೆಯಾಗದಿರಲು ಪೌಷ್ಟಿಕ ಆಹಾರದ ಕುರಿತು ಜಾಗೃತಿ ಮೂಡಿಸಲು ಈ ಕಾರ್ಯಕ್ರಮವನ್ನು ಸರ್ಕಾರ ಹಮ್ಮಿಕೊಂಡಿದೆ. ಇದರ ಬಗ್ಗೆ ಮಹಿಳೆಯರು ಹೆಚ್ಚಿನ ಗಮನಹರಿಸುವಂತೆ ಸಲಹೆ ನೀಡಿದರು. ಪ್ರತಿ ತಿಂಗಳು ಅಂಗನವಾಡಿ ಕೇಂದ್ರದಲ್ಲಿ ಮಹಿಳೆಯರು ಮತ್ತು ಮಕ್ಕಳಿಗೆ ವಿತರಿಸುವ ದವಸ ಧಾನ್ಯಗಳಿರುವ ಆಹಾರ ಕಿಟ್‌ಗಳನ್ನು ಸರಿಯಾದ ಸಮಯಕ್ಕೆ ಪಡೆದುಕೊಂಡು ಸದುಪಯೋಗ ಪಡಿಸಿಕೊಳ್ಳುವಂತೆ ತಿಳಿಸಿದರು. ಪ್ರತಿ ಮಕ್ಕಳು ಅಂಗನವಾಡಿ ಕೇಂದ್ರಕ್ಕೆ ಪ್ರತಿ ನಿತ್ಯ ಬರಬೇಕು ಅಂಗನವಾಡಿ ಕೇಂದ್ರಗಳಲ್ಲಿ ಅನೇಕ ಸೌಲಭ್ಯಗಳು ಸಿಗುತಿದೆ ಎಂದರು.
ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಆಯಿಷ, ಸಮುದಾಯ ಆರೋಗ್ಯ ಅಧಿಕಾರಿ CHO ಸವಿತಾ, ಆಶಾ ಕಾರ್ಯಕರ್ತೆ ಇಂದಿರಾ, ಅಂಗನವಾಡಿ ಕಾರ್ಯಕರ್ತೆ ಗಿರಿಜಾ ಕಿತ್ತೂರು, ಭಾಗ್ಯ ಬೆಳ್ಳಾರಳ್ಳಿ, ಸುಮಿತ್ರ ಮಣಗಲಿ, ಕಿತ್ತೂರು ಶಾಲೆಯ ಮುಖ್ಯ ಶಿಕ್ಷಕಿ ರೇಖಾ ಹಾಗೂ ಬಾಲ ವಿಕಾಸ ಸಮಿತಿಯ ಅಧ್ಯಕ್ಷರಾದ ಪ್ರಿಯ ಮತ್ತು ಗರ್ಭಿಣಿಯರು ಬಾಣಂತಿಯರು ಮಕ್ಕಳು ಹಾಗೂ ಪೋಷಕರು ಹಾಜರಿದ್ದರು.