ದೊಡ್ಡಮಳ್ತೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೊಡ್ಡ ಮಳ್ತೆ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಅಭಿಯಾನ

ದೊಡ್ಡಮಳ್ತೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೊಡ್ಡ ಮಳ್ತೆ  ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಅಭಿಯಾನ

ಶನಿವಾರಸಂತೆ : ದೊಡ್ಡ ಮಳ್ತೆ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಅಭಿಯಾನ ಕಾರ್ಯಕ್ರಮ ಗುರುವಾರ ನಡೆಯಿತು. ದೊಡ್ಡಮಳ್ತೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಡಿ. ಎಮ್. ಗೋಪಾಲಕೃಷ್ಣ ಹಾಗೂ ಗ್ರಾಮ ಪಂಚಾಯಿತಿ ಸದಸ್ಯೆ ಪ್ರಮೀಳಾ ಹೆಚ್. ಪಿ. ಕಾರ್ಯಕ್ರಮವನ್ನು ಉದ್ಘಾಟಿಸಿದರು.

 ನಂತರ ಅಧ್ಯಕ್ಷ ಡಿ. ಎಂ. ಗೋಪಾಲ್ ಕೃಷ್ಣ ಮಾತನಾಡಿ ಪ್ರತಿ ವರ್ಷ ಇಲ್ಲಿನ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಅಭಿಯಾನ ಸೇರಿದಂತೆ ಇನ್ನಿತರ ಎಲ್ಲಾ ಕಾರ್ಯಕ್ರಮಗಳನ್ನು ಅಚ್ಚುಕಟ್ಟಾಗಿ ನಡೆಸಿಕೊಂಡು ಬಂದಿರುವುದು ಅಂಗನವಾಡಿ ಕಾರ್ಯಕರ್ತೆಯರ ಕಾರ್ಯ ವೈಖರಿಯನ್ನು ಬಿಂಬಿಸುತ್ತದೆ ಎಂದರು.

 ದೊಡ್ಡಮಳ್ತೆ ಗ್ರಾಮ ಪಂಚಾಯತ್ ಸದಸ್ಯೆ ಪ್ರಮೀಳಾ ಮಾತನಾಡಿ, ಗರ್ಭಿಣಿಯರು ಹೆಚ್ಚಾಗಿ ಪೌಷ್ಠಿಕ ಆಹಾರವನ್ನು ಸೇವಿಸಬೇಕು. ಸ್ಥಳೀಯವಾಗಿ ಸಿಗುವ ಹಣ್ಣು ಹಂಪಲು, ತರಕಾರಿ, ಸೊಪ್ಪು, ಮೊಳಕೆ ಬರಿಸಿದ ಕಾಳು ಮುಂತಾದವುಗಳಲ್ಲಿ ಪೌಷ್ಠಿಕಾಂಶ ಹೆಚ್ಚಾಗಿರುವುದ್ದರಿಂದ ಇವುಗಳನ್ನು ಸೇವಿಸುವುದ್ದರಿಂದ ಗರ್ಭಿಣಿಯರಲ್ಲಿ ಪೌಷ್ಠಿಕಾಂಶ ವೃದ್ದಿಸುತ್ತದೆ ಎಂದರು. ಗರ್ಭಿಣಿಯರು ಪೌಷ್ಠಿಕಾಂಶ ಆಹಾರ ಸೇವಿಸುವ ಜೊತೆಯಲ್ಲಿ ಶಾಖಾಹಾರ ಗರ್ಭಿಣಿಯರು ಪೌಷ್ಠಿಕಾಂಶ ಒಳಗೊಂಡಿರುವ ಮೊಟ್ಟೆ, ಮೀನು, ಮೌಂಸವನ್ನು ಸೇವಿಸಬೇಕು ಇದರಿಂದ ಮಗುವಿನ ಬೆಳವಣಿಗೆ ಉತ್ತಮಗೊಳ್ಳುತ್ತದೆ ಎಂದು ಹೇಳಿದರು.

 ವಳಗುಂದ ಆಶಾ ಕಾರ್ಯಕರ್ತೆ ಈಶ್ವರಿ ಮಾತನಾಡಿ ಗರ್ಭಿಣಿಯರು ಮತ್ತು ಬಾಣಂತಿಯರು ಸರಿಯಾದ ಸಮಯಯಕ್ಕೆ ಚುಚ್ಚುಮದ್ದು ಮತ್ತು ಲಸಿಕೆಯನ್ನು ತೆಗೆದುಕೊಳ್ಳುವ ಕುರಿತು ಮಾಹಿತಿ ನೀಡಿದರು.

ಆರೋಗ್ಯ ಸುರಕ್ಷಾಣಧಿಕಾರಿ ದಿವ್ಯ ಮಾತಾನಾಡಿ ಆರೋಗ್ಯವೇ ಭಾಗ್ಯ ಎಂಬಂತೆ ಮಹಿಳೆಯರಲ್ಲಿ ಮತ್ತು ಅಪೌಷ್ಟಿಕತೆಯನ್ನು ಹೋಗಲಾಡಿಸುವ ಸಲುವಾಗಿ ಪೋಷಣ್ ಅಭಿಯಾನ ಕಾರ್ಯಕ್ರಮದಲ್ಲಿ ಪೌಷ್ಟಿಕ ಆಹಾರದ ಪ್ರಾತ್ಯಕ್ಷಿಕೆ ಮಾಡಿ ಅದರಲ್ಲಿರುವ ಪೌಷ್ಟಿಕಾಂಶದ ಬಗ್ಗೆ ಮಾಹಿತಿಯನ್ನು ನೀಡಿದಾಗ ಫಲಾನುಭವಿಗಳು ಅಪೌಷ್ಟಿಕತೆಯಿಂದ ಮುಕ್ತರಾಗಬಹುದೆಂದು ತಿಳಿಸಿದರು .

 ಕಾರ್ಯಕ್ರಮದಲ್ಲಿ ದೊಡ್ಡಮಳ್ತೆ ಅಂಗನವಾಡಿ ಕಾರ್ಯಕರ್ತೆ ಪೂರ್ಣಿಮಾ ಹಾಗೂ ಕಾಗಡಿಕಟ್ಟೆ ಅಂಗನವಾಡಿ ಕಾರ್ಯಕರ್ತೆ ಸವಿತಾ, ದೊಡ್ಡಮಳ್ತೆ ಆಶಾ ಕಾರ್ಯಕರ್ತೆ ಈಶ್ವರಿ, ಕಾಗಡಿಕಟ್ಟೆ ಆಶಾ ಕಾರ್ಯಕರ್ತೆ ಶೈಲಾ, ಅಂಗನವಾಡಿ ಸಹಾಯಕಿ ಕುಸುಮ ಪಂಚಾಯಿತಿ ಕರವಸೂಲಿಗಾರ ವಿಶ್ವರೂಪಚಾರ್ಯ, ಹಾಗೂ ಪಂಚಾಯತ್ ವ್ಯಾಪ್ತಿಯ ಗರ್ಭಿಣಿಯರು, ಬಾಣಂತಿಯರು ಹಾಗೂ ಪುಟಾಣಿ ಮಕ್ಕಳು ಗ್ರಾಮಸ್ಥರು ಹಾಜರಿದ್ದರು.