Kodagu

ಆ.06 ರಂದು ಅಂಚೆ ಅದಾಲತ್ ಸಭೆ

admincoorgdaily

ಮಡಿಕೇರಿ:-ಅಂಚೆ ಅದಾಲತ್‌ನ ಮುಂದಿನ ಸಭೆಯು ಆಗಸ್ಟ್, 06 ರಂದು ಬೆಳಗ್ಗೆ 10 ಗಂಟೆಗೆ ಕೊಡಗು ಅಂಚೆ ವಿಭಾಗದ ವಿಭಾಗೀಯ ಕಚೇರಿ, ಸಿದ್ದಾಪುರ ರಸ್ತೆ ಅಶೋಕ್ ಪುರದಲ್ಲಿ ನಡೆಯಲಿದೆ. ಸಭೆಯಲ್ಲಿ ಕೊಡಗು ಅಂಚೆ ವಿಭಾಗದ ಅಂಚೆ ಸೇವೆಗೆ ಸಂಬಂಧಿಸಿದ ಎಲ್ಲಾ ತರಹದ ದೂರುಗಳನ್ನು ಸ್ವೀಕರಿಸಿ ಚರ್ಚಿಸಲಾಗುತ್ತದೆ. ದೂರುಗಳಿದ್ದಲ್ಲಿ ‘ಅಂಚೆ ಅದಾಲತ್’ ಎಂದು ಬರೆದು ಅಂಚೆ ಅಧೀಕ್ಷಕರು, ಕೊಡಗು ಅಂಚೆ ವಿಭಾಗ, ಮಡಿಕೇರಿ ಇವರಿಗೆ ಆಗಸ್ಟ್, 05 ರೊಳಗೆ ತಲುಪುವಂತೆ ಕಳುಹಿಸಲು ಕೋರಿದೆ. ನಂತರ ಆಗಸ್, 06 ರಂದು ಸಭೆಯಲ್ಲಿ ಭಾಗವಹಿಸಬಹುದು ಎಂದು ಕೊಡಗು ಅಂಚೆ ವಿಭಾಗದ ಅಂಚೆ ಅಧೀಕ್ಷಕರು ತಿಳಿಸಿದ್ದಾರೆ.