ಏ.24 ರಂದು ವಿದ್ಯುತ್ ವ್ಯತ್ಯಯ
ಮಡಿಕೇರಿ ಏ.22:-ಮೂರ್ನಾಡು 33/11 ಕೆ.ವಿ ವಿದ್ಯುತ್ ವಿತರಣಾ ಉಪ ಕೇಂದ್ರದ ಕೇಂದ್ರದಿಂದ ಹೊರಹೊಮ್ಮುವ ಎಫ್3 ಮೂರ್ನಾಡು ಫೀಡರ್‍ನಲ್ಲಿ ಏಪ್ರಿಲ್, 24 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಕೊಡಗು ಜಾಲ ಬಲವರ್ಧನೆ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದರಿಂದ ಈ ಮಾರ್ಗದಿಂದ ವಿದ್ಯುತ್ ಸರಬರಾಜಾಗುವ ಮೂರ್ನಾಡು ಟೌನ್, ಮುತ್ತಾರ್‍ಮುಡಿ, ಕುಂಬಳದಾಳು, ಕಿಗ್ಗಾಲು, ಕಬಡಗೇರಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ರಾಮಚಂದ್ರ ಅವರು ಕೋರಿದ್ದಾರೆ.