ಆ.18 ರಂದು ವಿದ್ಯುತ್ ವ್ಯತ್ಯಯ!

ಆ.18 ರಂದು ವಿದ್ಯುತ್ ವ್ಯತ್ಯಯ!

ಮಡಿಕೇರಿ:-66/33/11 ಕೆ.ವಿ ವಿರಾಜಪೇಟೆ ವಿದ್ಯುತ್ ವಿತರಣಾ ಉಪಕೇಂದ್ರದ ವಿರಾಜಪೇಟೆ ಶಾಖಾ ವ್ಯಾಪ್ತಿಯ ವಿಎಫ್-3 ಕೆ.ಎಸ್.ಆರ್.ಟಿ.ಸಿ ಮತ್ತು ವಿಎಫ್-7 ಹೆಗ್ಗಳ ಫೀಡರ್‍ಗಳಲ್ಲಿ ಆಗಸ್ಟ್, 18 ರಂದು ಬೆಳಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ಸದರಿ ಮಾರ್ಗಗಳನ್ನು ಬೇರ್ಪಡಿಸುವ ಕಾರ್ಯ ಕೈಗೆತ್ತಿಕೊಂಡಿರುವುದರಿಂದ ಈ ಮಾರ್ಗದಿಂದ ವಿದ್ಯುತ್ ಸರಬರಾಜಾಗುವ ವಿರಾಜಪೇಟೆ ಪಟ್ಟಣದ ತೆಲುಗರ ಬೀದಿ, ಅರಸುನಗರ, ಸುಂಕದಕಟ್ಟೆ, ದೊಡ್ಡಟ್ಟಿ ಚೌಕಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.