ಡಿ.11 ರಂದು ವಿದ್ಯುತ್ ವ್ಯತ್ಯಯ
ಮಡಿಕೇರಿ :-66/11 ಕೆ.ವಿ ಮಡಿಕೇರಿ ವಿದ್ಯುತ್ ಉಪ ಕೇಂದ್ರದಿಂದ ಹೊರಹೊಮ್ಮುವ ಎಫ್1 ಕೋಟೆ ಫೀಡರ್‍ನಲ್ಲಿ ಹಾಗೂ ಎಫ್5 ಜಿ.ಟಿ ರಸ್ತೆ ಫೀಡರ್‍ನಲ್ಲಿ ಡಿಸೆಂಬರ್, 11 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಕೊಡಗು ವಿದ್ಯುತ್ ಜಾಲದ ಬಲವರ್ಧನೆಯ ಕಾಮಗಾರಿಯನ್ನು ಕೈಗೆತ್ತಿಕೊಂಡಿರುವುದರಿಂದ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಆದ್ದರಿಂದ ಚೈನ್‍ಗೇಟ್, ಪುಟಾಣಿನಗರ, ಸುದರ್ಶನ ವೃತ್ತ, ಜಯನಗರ, ಸಿದ್ದಾಪುರ ರಸ್ತೆ, ಜಿಟಿ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ರಾಮಚಂದ್ರ ಅವರು ಕೋರಿದ್ದಾರೆ.
