ಡಿ.16 ರಂದು ವಿದ್ಯುತ್ ವ್ಯತ್ಯಯ

ಡಿ.16 ರಂದು ವಿದ್ಯುತ್ ವ್ಯತ್ಯಯ

ಮಡಿಕೇರಿ:-66/11 ಕೆ.ವಿ.ವಿರಾಜಪೇಟೆ ವಿದ್ಯುತ್ ವಿತರಣಾ ಉಪ ಕೇಂದ್ರದಿಂದ ಹೊರಹೊಮ್ಮುವ 33 ಕೆ.ವಿ ಸಿದ್ದಾಪುರ ವಿವಿ ಕೇಂದ್ರದಲ್ಲಿ ಡಿಸೆಂಬರ್, 16 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ 5 ಎಂವಿಎ ಪರಿವರ್ತಕ ಬದಲಾವಣೆ ಹಾಗೂ ವಿದ್ಯುತ್ ಕಂಬಗಳನ್ನು ಬದಲಾಯಿಸುವ ಕಾಮಗಾರಿ ಕೈಗೊಂಡಿರುವುದರಿಂದ ಈ ಮಾರ್ಗದಿಂದ ವಿದ್ಯುತ್ ಸರಬರಾಜಾಗುವ ಸಿದ್ದಾಪುರ ಪಟ್ಟಣ, ಕರಡಿಗೋಡು, ಅವರೆಗುಂದ, ಕೆಸವಿನಹಳ್ಳ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.