ಫೆ.03 ರಂದು ವಿದ್ಯುತ್ ವ್ಯತ್ಯಯ
admincoorgdaily

ಮಡಿಕೇರಿ :-33/11 ಕೆ.ವಿ ಮೂರ್ನಾಡು ವಿದ್ಯುತ್ ವಿತರಣಾ ಉಪ ಕೇಂದ್ರದ ಕೇಂದ್ರದಿಂದ ಹೊರಹೊಮ್ಮುವ ಎಫ್2 ನಾಪೋಕ್ಲು ಹಾಗೂ ಎಫ್5 ಹೊದ್ದೂರು ಫೀಡರ್‍ನಲ್ಲಿ ಫೆಬ್ರವರಿ, 03 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆ ವರೆಗೆ ಕೊಡಗು ಜಾಲ ಬಲವರ್ಧನೆ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದರಿಂದ ಈ ಮಾರ್ಗದಿಂದ ವಿದ್ಯುತ್ ಸರಬರಾಜಾಗುವ ಹೊದ್ದೂರು, ಕಬಡಗೇರಿ, ಕೊಳಕೇರಿ, ಕುಂಜಿಲ, ಎಮ್ಮೆಮಾಡು, ನೆಲಜಿ, ಬಲ್ಲಮಾವಟಿ, ಪೆರೂರು, ನಾಪೋಕ್ಲು ಟೌನ್, ಕೊಟ್ಟಮುಡಿ, ಪಾಲೂರು, ಚೆರಿಯ ಪರಂಬು, ಹಳೆ ತಾಲೂಕು ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ರಾಮಚಂದ್ರ ಅವರು ಕೋರಿದ್ದಾರೆ.