ಫೆ.07 ರಂದು ವಿದ್ಯುತ್ ವ್ಯತಯ

Feb 4, 2026 - 17:55
 0  1.2k
ಫೆ.07 ರಂದು ವಿದ್ಯುತ್ ವ್ಯತಯ

ಮಡಿಕೇರಿ ಫೆ.04:-66/11 ಕೆ.ವಿ ವಿರಾಜಪೇಟೆ ವಿದ್ಯುತ್ ವಿತರಣಾ ಉಪಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಕೈಗೊಂಡಿರುವುದರಿಂದ ಸದರಿ ಕೇಂದ್ರದಿಂದ ಹೊರಹೊಮ್ಮುವ ಮಾರ್ಗಗಳಲ್ಲಿ ವಿದ್ಯುತ್ ವ್ಯತ್ಯಯವಾಗುವುದರಿಂದ, ಅರಪಟ್ಟು-ಪಾಲಂಗಾಲ, ಕ್ಲಬ್ ಮಹೀಂದ್ರ, ಕದನೂರು ಭಗವತಿ ದೇವಸ್ಥಾನ ವ್ಯಾಪ್ತಿ, ಚರ್ಚ್ ಕೆದಮುಳ್ಳೂರು ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಫೆಬ್ರವರಿ, 07 ರಂದು ಬೆಳಗ್ಗೆ 09 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.

What's Your Reaction?

Like Like 0
Dislike Dislike 0
Love Love 1
Funny Funny 0
Angry Angry 0
Sad Sad 1
Wow Wow 1