ಜು.14 ರಂದು ವಿದ್ಯುತ್ ವ್ಯತ್ಯಯ

Jul 13, 2026 - 18:10
 0  994
ಜು.14 ರಂದು ವಿದ್ಯುತ್ ವ್ಯತ್ಯಯ

ಮಡಿಕೇರಿ ಜು.13:-ಮೂರ್ನಾಡು 33/11 ಕೆ.ವಿ ವಿದ್ಯುತ್ ವಿತರಣಾ ಉಪಕೇಂದ್ರದ ಕೇಂದ್ರದಿಂದ ಹೊರಹೊಮ್ಮುವ ಎಫ್3 ಮೂರ್ನಾಡು ಫೀಡರ್‍ನಲ್ಲಿ ಜುಲೈ, 14 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಕೊಡಗು ವಿದ್ಯುತ್ ಜಾಲ ಬಲವರ್ಧನೆ ಹಾಗೂ ಮಳೆಗಾಲ ಮುಂಜಾಗೃತಾ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದರಿಂದ ಈ ಮಾರ್ಗದಿಂದ ವಿದ್ಯುತ್ ಸರಬರಾಜಾಗುವ ಮೂರ್ನಾಡು ಟೌನ್, ಕಿಗ್ಗಾಲು, ಮುತ್ತಾರ್‍ಮುಡಿ, ಬೇತ್ರಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ರಾಮಚಂದ್ರ ಅವರು ಕೋರಿದ್ದಾರೆ.

What's Your Reaction?

Like Like 2
Dislike Dislike 1
Love Love 0
Funny Funny 0
Angry Angry 0
Sad Sad 0
Wow Wow 0