ಜು.15 ರಂದು ವಿದ್ಯುತ್ ವ್ಯತ್ಯಯ
ಮಡಿಕೇರಿ ಜು.14:-ಮೂರ್ನಾಡು 33/11 ಕೆ.ವಿ ವಿದ್ಯುತ್ ವಿತರಣಾ ಉಪ ಕೇಂದ್ರದಿಂದ ಹೊರಹೊಮ್ಮುವ ಎಫ್3 ಮೂರ್ನಾಡು ಫೀಡರ್‍ನಲ್ಲಿ ಜುಲೈ, 15 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಕೊಡಗು ವಿದ್ಯುತ್ ಜಾಲ ಬಲವರ್ಧನೆ ಹಾಗೂ ಮಳೆಗಾಲ ಮುಂಜಾಗೃತಾ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದರಿಂದ ಈ ಮಾರ್ಗದಿಂದ ವಿದ್ಯುತ್ ಸರಬರಾಜಾಗುವ ಮೂರ್ನಾಡು ಟೌನ್, ಕಿಗ್ಗಾಲು, ಮುತ್ತಾರ್‍ಮುಡಿ, ಬೇತ್ರಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ರಾಮಚಂದ್ರ ಅವರು ಕೋರಿದ್ದಾರೆ.
What's Your Reaction?
Like
1
Dislike
0
Love
0
Funny
0
Angry
1
Sad
1
Wow
0

