ಜೂ.23 ರಂದು ವಿದ್ಯುತ್ ವ್ಯತ್ಯಯ

Jun 20, 2026 - 17:10
 0  604
ಜೂ.23 ರಂದು ವಿದ್ಯುತ್ ವ್ಯತ್ಯಯ

ಮಡಿಕೇರಿ ಜೂ.20:-ಮೂರ್ನಾಡು 33/11 ಕೆ.ವಿ ವಿದ್ಯುತ್ ವಿತರಣಾ ಉಪ ಕೇಂದ್ರದ ಕೇಂದ್ರದಿಂದ ಹೊರಹೊಮ್ಮುವ ಎಫ್3 ಮೂರ್ನಾಡು ಫೀಡರ್‍ನಲ್ಲಿ ಜೂನ್, 23 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಕೊಡಗು ಜಾಲ ಬಲವರ್ಧನೆ ಹಾಗೂ ಮಳೆಗಾಲ ಮುಂಜಾಗೃತಾ ಕಾಮಗಾರಿ ಕೈಗೆತ್ತಿಕೊಳ್ಳಲಾಗುತ್ತಿದೆ. ಆದ್ದರಿಂದ ಈ ಮಾರ್ಗದಿಂದ ವಿದ್ಯುತ್ ಸರಬರಾಜಾಗುವ ಮೂರ್ನಾಡು ಪಟ್ಟಣ, ಮುತ್ತಾರ್‍ಮುಡಿ, ಕುಂಬಳದಾಳು, ಕಿಗ್ಗಾಲು, ಕಬಡಗೇರಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 1
Wow Wow 0