ಮಾ.15 ರಂದು ವಿದ್ಯುತ್ ವ್ಯತ್ಯಯ
admincoorgdaily

ಮಡಿಕೇರಿ ಮಾ.13;-220/66/11 ಕೆ.ವಿ ಕುಶಾಲನಗರ ವಿದ್ಯುತ್ ವಿತರಣಾ ಉಪಕೇಂದ್ರದಿಂದ ಹೊರಹೊಮ್ಮುವ ಎಫ್-2 ಕಾವೇರಿ ಫೀಡರ್‍ನಲ್ಲಿ ಮಾರ್ಚ್, 15 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದ್ದು, ಈ ಫೀಡರ್‍ನಿಂದ ಸರಬರಾಜಾಗುವ ಕೂಡ್ಲೂರು, ನವಗ್ರಾಮ, ಸುಂದರನಗರ, ಇಂಡಸ್ಟ್ರಿಯಲ್ ಏರಿಯಾ, ಕೆ.ಐ.ಎ.ಡಿ.ಬಿ.ಎ, ಸಾಯಿ ಬಡಾವಣೆ, ಕುವೆಂಪು ಬಡಾವಣೆ, ಮುಳ್ಳುಸೋಗೆ, ಗುಮ್ಮನಕೊಲ್ಲಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.