ಮಾ.01 ರಂದು ವಿದ್ಯುತ್ ವ್ಯತ್ಯಯ

Feb 27, 2026 - 16:54
 0  1.3k
ಮಾ.01 ರಂದು ವಿದ್ಯುತ್ ವ್ಯತ್ಯಯ

ಮಡಿಕೇರಿ ಫೆ.27:-33/11 ಕೆ.ವಿ ಮೂರ್ನಾಡು ವಿದ್ಯುತ್ ವಿತರಣಾ ಉಪ ಕೇಂದ್ರದಿಂದ ಹೊರಹೊಮ್ಮುವ ಎಫ್2 ನಾಪೋಕ್ಲು ಹಾಗೂ ಎಫ್5 ಹೊದ್ದೂರು ಫೀಡರ್‌ನಲ್ಲಿ ಮಾರ್ಚ್, 01 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಕೊಡಗು ಜಾಲ ಬಲವರ್ಧನೆ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದರಿಂದ ಈ ಮಾರ್ಗದಿಂದ ವಿದ್ಯುತ್ ಸರಬರಾಜಾಗುವ ಹೊದ್ದೂರು, ಕಬಡಗೇರಿ, ಕೊಳಕೇರಿ, ಕುಂಜಿಲ, ಎಮ್ಮೆಮಾಡು, ನೆಲಜಿ, ಬಲ್ಲಮಾವಟಿ, ಪೆರೂರು, ನಾಪೋಕ್ಲು ಟೌನ್, ಕೊಟ್ಟಮುಡಿ, ಪಾಲೂರು, ಚೆರಿಯಪರಂಬು, ಹಳೆತಾಲೂಕು ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಈ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.

What's Your Reaction?

Like Like 0
Dislike Dislike 2
Love Love 0
Funny Funny 0
Angry Angry 0
Sad Sad 3
Wow Wow 0