ಮೇ.14 ರಂದು ವಿದ್ಯುತ್ ವ್ಯತ್ಯಯ
admincoorgdaily

ಮಡಿಕೇರಿ ಮೇ.12:-66/11 ಕೆ.ವಿ ಮಡಿಕೇರಿ ವಿದ್ಯುತ್ ವಿತರಣಾ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿಯನ್ನು ಕೈಗೆತ್ತಿಕೊಳ್ಳುತ್ತಿರುವುದರಿಂದ ಮೇ, 14 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಮಡಿಕೇರಿ 66/11 ಕೆ.ವಿ ವಿದ್ಯುತ್ ಉಪಕೇಂದ್ರದಿಂದ ಹೊರಹೊಮ್ಮುವ ಎಲ್ಲಾ ಮಾರ್ಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಈ ಮಾರ್ಗದಿಂದ ವಿದ್ಯುತ್ ಸರಬರಾಜಾಗುವ ಮಡಿಕೇರಿ ನಗರ, ರಾಜಸೀಟ್, ಗದ್ದಿಗೆ, ಕೋಟೆ, ಕುಂಡಮೇಸ್ತ್ರಿ, ಓಂಕಾರೇಶ್ವರ, ಜಿ.ಟಿ ರಸ್ತೆ, ಕೆ.ಎಸ್.ಆರ್.ಟಿ.ಸಿ, ಮೇಕೇರಿ, ಭಾಗಮಂಡಲ, ಬೋಯಿಕೇರಿ, ಸಂಪಾಜೆ, ಗಾಳಿಬೀಡು, ಮಕ್ಕಂದೂರು, ಹೆಬ್ಬೆಟ್ಟಗೇರಿ, ಕೆ.ಬಾಡಗ, ತಾಳತ್ಮನೆ, ಬೆಟ್ಟಗೇರಿ, ಚೆಟ್ಟಿಮಾನಿ, ಚೇರಂಬಾಣೆ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.