ಮೇ, 23 ರಂದು ವಿದ್ಯುತ್ ವ್ಯತ್ಯಯ
admincoorgdaily

ಮಡಿಕೇರಿ ಮೇ.22:-ಸೋಮವಾರಪೇಟೆ 66/11 ಕೆ.ವಿ ವಿದ್ಯುತ್ ವಿತರಣಾ ಉಪಕೇಂದ್ರದ ಕೇಂದ್ರದಿಂದ ಹೊರಹೊಮ್ಮುವ ಎಫ್2 ಶಾಂತಳ್ಳಿ ಫೀಡರ್‍ನಲ್ಲಿ ಮೇ, 23 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಫೀಡರ್ ನಿರ್ವಾಹಣೆ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದರಿಂದ ಈ ಮಾರ್ಗದಿಂದ ವಿದ್ಯುತ್ ಸರಬರಾಜಾಗುವ ಶಾಂತಳ್ಳಿ, ಬೆಟ್ಟದಳ್ಳಿ, ಬೀದಳ್ಳಿ, ಕುಂದಳ್ಳಿ, ಕುಡಿಗಾಣ, ತಾಕೇರಿ, ಕೊತ್ನಳ್ಳಿ, ತೋಳೂರು ಶೆಟ್ಟಳ್ಳಿ, ಕೂತಿ, ಹೊಸಬೀಡು, ನಗರಳ್ಳಿ, ಹೆಗ್ಗಡಮನೆ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.