ನ.04 (ನಾಳೆ) ರಂದು ವಿದ್ಯುತ್ ವ್ಯತ್ಯಯ
admincoorgdaily
ಮಡಿಕೇರಿ:-ಮೂರ್ನಾಡು 33/11 ಕೆ.ವಿ ವಿದ್ಯುತ್ ವಿತರಣಾ ಉಪಕೇಂದ್ರದ ಕೇಂದ್ರದಿಂದ ಹೊರಹೊಮ್ಮುವ ಎಫ್5 ಹೊದ್ದೂರು ಹಾಗೂ ಎಫ್2 ನಾಪೋಕ್ಲು ಫೀಡರ್‍ನಲ್ಲಿ ನವೆಂಬರ್, 04 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಕೊಡಗು ವಿದ್ಯುತ್ ಜಾಲದ ಬಲವರ್ಧನೆ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದರಿಂದ ಈ ಮಾರ್ಗದಿಂದ ವಿದ್ಯುತ್ ಸರಬರಾಜಾಗುವ ಹೊದ್ದೂರು, ಕಬಡಗೇರಿ, ಕೊಳಕೇರಿ, ಕಕ್ಕಬೆ, ಕುಂಜಿಲ, ಎಮ್ಮೆಮಾಡು, ನೆಲಜಿ, ಬಲ್ಲಮಾವಟಿ, ಪೇರೂರು, ನಾಪೋಕ್ಲು ಟೌನ್, ಕೊಟ್ಟಮುಡಿ, ಪಾಲೂರು, ಚೆರಿಯಪರಂಬು, ಹಳೆತಾಲೂಕು ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.