ಸೆ.10 ರಂದು ವಿದ್ಯುತ್ ವ್ಯತ್ಯಯ!
admincoorgdaily
ಮಡಿಕೇರಿ:-66/11ಕೆ.ವಿ ಮಡಿಕೇರಿ ವಿದ್ಯುತ್ ಉಪಕೇಂದ್ರದಿದ ಹೊರಹೊಮ್ಮುವ ಎಫ್12 ರಾಜಾಸೀಟ್ ಫೀಡರ್‌ನಲ್ಲಿ ಸೆಪ್ಟೆಂಬರ್, 10 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 5 ಗಂಟೆಯವರೆಗೆ ದಸರಾ ಪ್ರಯುಕ್ತ ಫೀಡರ್ ನಿರ್ವಹಣಾ ಕಾಮಗಾರಿ ನಡೆಸಬೇಕಿರುವುದರಿಂದ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಆದ್ದರಿಂದ ಡಿ.ಸಿ ಕಚೇರಿ, ರಾಜಸೀಟ್ ರಸ್ತೆ, ಇಂದಿರಾನಗರ, ಚಾಮುಂಡೇಶ್ವರಿನಗರ, ನ್ಯೂ ಎಕ್ಸಟೆಂಕ್ಷನ್, ಎಲ್.ಐ.ಸಿ ರಸ್ತೆ, ಸ್ಟುವರ್ಟ್ ಹಿಲ್, ಗೌಳಿ ಬೀದಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.