ಇಂದು ಕೊಡಗು ಜಿಲ್ಲೆಯ ವಿವಿಧೆಡೆ ವಿದ್ಯುತ್ ವ್ಯತ್ಯಯ: ನಿಮ್ಮೂರಲ್ಲಿ ನಾಳೆ ಕರೆಂಟ್ ಇರುತ್ತಾ! ಇಲ್ಲಿದೆ ನೋಡಿ ಮಾಹಿತಿ
ಮಡಿಕೇರಿ:-66/11 ಕೆ.ವಿ ಪೊನ್ನಂಪೇಟೆ ಮತ್ತು ಶ್ರೀಮಂಗಲ ವಿದ್ಯುತ್ ವಿತರಣಾ ಉಪಕೇಂದ್ರದಿಂದ ಹೊರಹೊಮ್ಮುವ ಏಪ್1-ನಲ್ಲೂರು, ಎಫ್2-ಬಾಳೆಲೆ, ಎಫ್4-ತಿತಿಮತಿ, ಎಫ್5-ಪಾಲಿಬೆಟ್ಟ, ಎಫ್6-ಬೇಗೂರು, ಎಫ್7-ಗೋಣಿಕೊಪ್ಪ, ಎಫ್8-ಪೊನ್ನಂಪೇಟೆ, ಎಫ್9-ಹಾತೂರು, ಎಫ್10-ಹೈಸೊಡ್ಲೂರು, ಎಫ್1-ಬಿರುನಾಣಿ, ಎಫ್2-ಕುಟ್ಟ, ಎಫ್3-ಶ್ರೀಮಂಗಲ, ಎಫ್4-ಕಾನೂರು, ಎಫ್5-ಕೆ.ಬಾಡಗ, ಎಫ್6-ಬೀರುಗ, ಎಫ್7-ಟಿ.ಶೆಟ್ಟೆಗೇರಿ ಫೀಡರ್‍ನಲ್ಲಿ ನವೆಂಬರ್, 12 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ದುರಸ್ತಿ ಕಾಮಗಾರಿಯನ್ನು ಕೈಗೆತ್ತಿಕೊಳ್ಳುತ್ತಿರುವುದರಿಂದ ಈ ಮಾರ್ಗದಿಂದ ವಿದ್ಯುತ್ ಸರಬರಾಜಾಗುವ ಸುಳುಗೋಡು, ಕೊಣನ ಕಟ್ಟೆ, ಬಾಳೆಲೆ, ದೇವನೂರು, ಕಿರುಗೂರು, ನಿಟ್ಟೂರು, ಜಾಗಲೆ, ಪೊನ್ನಂಪೇಟೆ, ಗೋಣಿಕೊಪ್ಪ, ತಿತಿಮತಿ, ಹಾತೂರು, ಅರುವತ್ತೋಕ್ಲು, ಕಾನೂರು, ದೇವರಪುರ, ಕಾಯಿಮನೆ, ಪೂಜೆಕಲ್ಲು, ಕುಟ್ಟ, ಶ್ರೀಮಂಗಲ, ನಾಲ್ಕೇರಿ, ಕೆ.ಬಾಡಗ, ಇರ್ಪು ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಕೋರಿದೆ.
--------------------------------------------
:-66/33/11 ಕೆ.ವಿ ಎಂಯುಎಸ್‍ಎಸ್ ಮಗ್ಗುಲ, ವಿರಾಜಪೇಟೆ ವಿದ್ಯುತ್ ವಿತರಣಾ ಉಪ ಕೇಂದ್ರದಿಂದ ಹೊರಹೊಮ್ಮುವ ಎಲ್ಲಾ 11 ಕೆವಿ ಮಾರ್ಗಗಳಲ್ಲಿ ನವೆಂಬರ್, 12 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ತುರ್ತು ದುರಸ್ತಿ ಕಾಮಗಾರಿಯನ್ನು ಕೈಗೆತ್ತಿಕೊಳ್ಳುತ್ತಿರುವುದರಿಂದ ಈ ಮಾರ್ಗದಿಂದ ವಿದ್ಯುತ್ ಸರಬರಾಜಾಗುವ ವಿರಾಜಪೇಟೆ, ಸಿದ್ದಾಪುರ, ಪಾಲಿಬೆಟ್ಟ ಮತ್ತು ಅಮ್ಮತ್ತಿ ಶಾಖಾ ವ್ಯಾಪ್ತಿಯ ವಿರಾಜಪೇಟೆ ಪಟ್ಟಣ, ಆರ್ಜಿ, ಬೇಟ್ಟೋಳ್ಳಿ, ಕದನೂರು, ಕಾಕೋಟುಪರಂಬು, ಕೆದಮಳ್ಳೂರು, ಬಿಟ್ಟಂಗಾಲ, ಬಿ.ಶೆಟ್ಟಿಗೇರಿ, ಅಮ್ಮತ್ತಿ, ಚೆಂಬೆಬೆಳ್ಳೂರು, ಕಣ್ಣಂಗಾಲ, ಹಾಲುಗುಂದ, ಕೊಂಡಗೇರಿ, ಬಿಳುಗುಂದ, ಸಿದ್ದಾಪುರ, ಮಾಲ್ದಾರೆ, ಕರಡಿಗೋಡು, ಗುಹ್ಯ, ಪಾಲಿಬೆಟ್ಟ, ಚೆನ್ನಯ್ಯನಕೋಟೆ, ಹುಂಡಿ, ಅಬ್ಯೂರು, ತಾರಿಕಟ್ಟೆ, ಚೆನ್ನಾಂಗಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.
ಹಾಗೆಯೇ 33/11 ಕೆ.ವಿ ಎಂಯುಎಸ್‍ಎಸ್ ಮೂರ್ನಾಡು ವಿದ್ಯುತ್ ವಿತರಣಾ ಉಪಕೇಂದ್ರದಿಂದ ಹೊರಹೊಮ್ಮುವ ಪಾರಾಣೆ, ನಾಪೋಕ್ಲು, ಮೂರ್ನಾಡು, ಹೊದ್ದೂರು, ಮರಗೋಡು ಫೀಡರ್‍ನಲ್ಲಿ ನವೆಂಬರ್, 12 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ನಿರ್ವಹಣಾ ಕಾಮಗಾರಿಯನ್ನು ಕೈಗೆತ್ತಿಕೊಳ್ಳುತ್ತಿರುವುದರಿಂದ ಈ ಮಾರ್ಗದಿಂದ ವಿದ್ಯುತ್ ಸರಬರಾಜಾಗುವ ಮೂರ್ನಾಡು, ಮರಗೋಡು, ಹಾಕತ್ತೂರು, ಹೊಸ್ಕೇರಿ, ಹೊದ್ದೂರು, ನರಿಯಂದಡ, ನಾಪೋಕ್ಲು, ಕುಂಜಿಲ, ಎಮ್ಮೆಮಾಡು, ಬಲ್ಲಮಾವಟಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.
--------------------------------------------
:-ಕುಶಾಲನಗರ 220/66/11 ಕೆ.ವಿ ವಿದ್ಯುತ್ ವಿತರಣಾ ಉಪಕೇಂದ್ರದಿಂದ ಹೊರಹೊಮ್ಮುವ ಎಲ್ಲಾ 11 ಕೆವಿ ಮಾರ್ಗಗಳಲ್ಲಿ ನವೆಂಬರ್, 12 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ತುರ್ತು ಕಾಮಗಾರಿಯನ್ನು ಕೈಗೆತ್ತಿಕೊಳ್ಳುತ್ತಿರುವುದರಿಂದ ಈ ಮಾರ್ಗದಿಂದ ವಿದ್ಯುತ್ ಸರಬರಾಜಾಗುವ ಕುಶಾಲನಗರ ಟೌನ್, ನಂಜರಾಯಪಟ್ಟಣ, ಗುಡ್ಡೆಹೊಸುರು, ಹೆಬ್ಬಾಲೆ, ಕಣಿವೆ, ಮಲ್ಲೇನಹಲ್ಲಿ, ಭುವನಗಿರಿ, ಕೂಡಿಗೆ, ಇಂಡಸ್ಟ್ರಿಯಲ್ ಏರಿಯ, ಕೂಡುಮಂಗಳೂರು, ಕಾನ್‍ಬೈಲು, ಅಂದಗೋವೆ, ನಾಕೂರು, ಹಾದ್ರ ಹೆರೂರು, ಹಟ್ಟಿಹೊಳೆ, ಗರ್ವಾಲೆ, ಗರಗಂದೂರು, ಕಾಂಡನಕೊಲ್ಲಿ, ಕುಂಬೂರು, ಮಾದಾಪುರ, ಪನ್ಯ, ಚೆಟ್ಟಳ್ಳಿ, ನೆಲ್ಲಿಹುದಿಕೇರಿ, ಅಭ್ಯತ್‍ಮಂಗಲ, ನಾಕೂರು, ಶಿರಂಗಾಲ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.
