ಜ.02ರಂದು ಶನಿವಾರಸಂತೆ ಭಾಗದ ವಿವಿಧೆಡೆ ವಿದ್ಯುತ್ ವ್ಯತ್ಯಯ
ಮಡಿಕೇರಿ ಜ.01:-66/11 ಕೆ.ವಿ ಶನಿವಾರಸಂತೆ ವಿದ್ಯುತ್ ವಿತರಣಾ ಉಪ ಕೇಂದ್ರದಿಂದ ಹೊರಹೊಮ್ಮುವ ಎಫ್3 ಶನಿವಾರಸಂತೆ ಟೌನ್ ಫೀಡರ್‍ನಲ್ಲಿ ಜನವರಿ, 02 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಕೊಡಗು ವಿದ್ಯುತ್ ಜಾಲದ ಬಲವರ್ಧನೆಯ ಕಾಮಗಾರಿಯನ್ನು ಕೈಗೆತ್ತಿಕೊಂಡಿರುವುದರಿಂದ ಈ ಫೀಡರ್‍ನಿಂದ ಹೊರಹೊಮ್ಮುವ ಶನಿವಾರಸಂತೆ ಪಟ್ಟಣ, ಗುಡುಗಳಲೆ, ಕೆ.ಆರ್.ಸಿ ಸರ್ಕಲ್, ಅಡ್ಡಶೆಟ್ಟಳ್ಳಿ, ಶೆಟ್ಟಿಗನಹಳ್ಳಿ, ಮಾದ್ರೆ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ರಾಮಚಂದ್ರ ಅವರು ಕೋರಿದ್ದಾರೆ.