ನ.12 ರಂದು ಸೋಮವಾರಪೇಟೆ ಭಾಗದ ವಿವಿಧೆಡೆ ವಿದ್ಯುತ್ ವ್ಯತ್ಯಯ
admincoorgdaily
ಮಡಿಕೇರಿ:-33/11 ಕೆ.ವಿ ಸೋಮವಾರಪೇಟೆ ವಿದ್ಯುತ್ ವಿತರಣಾ ಉಪಕೇಂದ್ರದಿಂದ ಹೊರಹೊಮ್ಮುವ ಎಫ್4 ಸೋಮವಾರಪೇಟೆ ಟೌನ್ ಫೀಡರ್‍ನಲ್ಲಿ ನವೆಂಬರ್, 12 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಕಾಪರ್ ಕಂಡಕ್ಟರ್ ಕಾಮಗಾರಿ ಹಾಗೂ ಕೊಡಗು ವಿದ್ಯುತ್ ಜಾಲದ ಬಲವರ್ಧನೆ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದರಿಂದ ಈ ಮಾರ್ಗದಿಂದ ವಿದ್ಯುತ್ ಸರಬರಾಜಾಗುವ ಎಂ.ಜಿ ರಸ್ತೆ, ಸಿ.ಕೆ. ಸುಬ್ಬಯ್ಯ ರಸ್ತೆ, ಕ್ಲಬ್ ರಸ್ತೆ, ಬಸವೇಶ್ವರ ರಸ್ತೆ, ಬಾಣಾವಾರ ರಸ್ತೆ, ಚೌಡ್ಲು, ಆಲೆಕಟ್ಟೆ ರಸ್ತೆ, ಕಕ್ಕೆಹೊಳೆ, ಹಾನಗಲ್ಲು, ಕಾಂನ್ವೆಟ್ ಬಾಣೆ, ಸೋಮವಾರಪೇಟೆ ಪಟ್ಟಣ ಪಂಚಾಯಿತಿಗೆ ಒಳಪಡುವ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.