ಸೋಮವಾರಪೇಟೆ ತಾಲ್ಲೂಕಿನ ವಿವಿಧೆಡೆ ನಾಳೆ ವಿದ್ಯುತ್ ವ್ಯತ್ಯಯ

ಸೋಮವಾರಪೇಟೆ ತಾಲ್ಲೂಕಿನ ವಿವಿಧೆಡೆ ನಾಳೆ ವಿದ್ಯುತ್ ವ್ಯತ್ಯಯ

ಸೋಮವಾರಪೇಟೆ:66/11 ಕೆ.ವಿ ಸೋಮವಾರಪೇಟೆ ವಿದ್ಯುತ್ ವಿತರಣಾ ಉಪಕೇಂದ್ರದ ಕೇಂದ್ರದಿಂದ ಹೊರಹೊಮ್ಮುವ F2 ಶಾಂತಳ್ಳಿ ಹಾಗೂ F4 ಸೋಮವಾರಪೇಟೆ ಫೀಡರ್‌ ನಲ್ಲಿ ದಿನಾಂಕ 06.11.2025 ರಂದು ಬೆಳಿಗ್ಗೆ 09.00ರಿಂದ ಸಂಜೆ 6.00 ಗಂಟೆಯವರೆಗೆ ಹೊಸ ಲೈನ್ ಆಳವಡಿಸುವ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದರಿಂದ ಸದರಿ ಮಾರ್ಗದಿಂದ ವಿದ್ಯುತ್ ಸರಬರಾಜಾಗುವ ಹಾನಗಲ್ಲು, ಶೆಟ್ಟಳ್ಳಿ, ಹಾನಗಲ್ಲು ಬಾಣೆ, ತೋಳೂರು ಶೆಟ್ಟಳ್ಳಿ, ಕೂತಿ ಯಡೂರು, ತಾಕೇರಿ, ಕಿರಂಗಂದೂರು, ಹರಗ, ಶಾಂತಳ್ಳಿ, ಬೆಟ್ಟದಳ್ಳಿ, ನಾಗರಳ್ಳಿ, ಕುಂದಳ್ಳಿ, ಕಿಕ್ಕರಳ್ಳಿ, ಕುಡಿಗಾಣ, ಕೊತ್ನಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಈ ಮೇಲೆ ತಿಳಿಸಿರುವ ಸಮಯದಲ್ಲಿ ಹಾಗೂ ಸ್ಥಳದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಕೋರಿದ್ದಾರೆ.