ನ.25 ರಂದು ಜಿಲ್ಲೆಯ ವಿವಿಧೆಡೆ ವಿದ್ಯುತ್ ವ್ಯತ್ಯಯ
ಮಡಿಕೇರಿ -ಆಲೂರು ಸಿದ್ದಾಪುರ ವಿದ್ಯುತ್ ವಿತರಣಾ 66/11 ಕೆ.ವಿ ಉಪ ಕೇಂದ್ರದಿಂದ ಹೊರಹೊಮ್ಮುವ 11 ಕೆವಿ ಮಾರ್ಗಗಳಲ್ಲಿ ನವೆಂಬರ್, 25 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ 3ನೇ ತ್ರೈಮಾಸಿಕ ನಿರ್ವಾಹಣೆ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದರಿಂದ ಈ ಮಾರ್ಗದಿಂದ ವಿದ್ಯುತ್ ಸರಬರಾಜಾಗುವ ಕಣಗಾಲು, ದೊಡ್ಡಳ್ಳಿ, ಗೋಣಿಮರೂರು, ಬಾಣವಾರ, ಸಿದ್ದಲಿಂಗಪುರ, ಮಾಲಂಬಿ, ಹೊಸಗುತ್ತಿ, ಕೈಸರದಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಕಾರ್ಯ ಮತ್ತು ಪಾಲನೆ ವಿಭಾಗ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.
ಹಾಗೆಯೇ 33/11 ಕೆ.ವಿ ಮೂರ್ನಾಡು ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಹೊಮ್ಮುವ 11 ಕೆ.ವಿ ಎಫ್1 ಪಾರಾಣೆ ಮಾರ್ಗದಲ್ಲಿ ಫೀಡರ್ ನಿರ್ವಹಣೆ ಕಾಮಗಾರಿ ಕೈಗೊಂಡಿರುವುದರಿಂದ ನವೆಂಬರ್, 25 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ಬಲಮುರಿ, ಪಾರಾಣೆ, ಬಾವಲಿ, ಕೈಕಾಡು, ಕಿರಂದಾಡು, ಎಡಪಾಲ, ಕಡಂಗ, ಚೆಂಯ್ಯಂಡಾಣೆ, ಚೇಲವಾರ, ಮರಂದೋಡ, ಕೋಕೇರಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.
