ಅಕ್ಟೋಬರ್ 30(ನಾಳೆ) ವಿವಿಧೆಡೆ ವಿದ್ಯುತ್ ವ್ಯತ್ಯಯ
ವಿರಾಜಪೇಟೆ: 66/33/11 ಕೆ.ವಿ ವಿರಾಜಪೇಟೆ ವಿದ್ಯುತ್ ವಿತರಣಾ ಉಪಕೇಂದ್ರದ ವಿರಾಜಪೇಟೆ ಶಾಖಾ ವ್ಯಾಪ್ತಿಯ VF-3 ಪಂಜರ್‌ಪೇಟೆ ಫೀಡರ್ ನಲ್ಲಿ ದಿನಾಂಕ 30.10.2025 ರಂದು ಬೆಳಿಗ್ಗೆ 09.00ರಿಂದ ಸಂಜೆ 6.00 ಗಂಟೆಯವರೆಗೆ ವಿದ್ಯುತ್ ಜಾಲದ ಬಲವರ್ಧನೆ ಕಾಮಗಾರಿಯನ್ನು ಕೈಗೆತ್ತಿಕೊಂಡಿರುವುದರಿಂದ ಸದರಿ ಮಾರ್ಗದಿಂದ ವಿದ್ಯುತ್ ಸರಬರಾಜಾಗುವ ವಿರಾಜಪೇಟೆ ಪಟ್ಟಣದ ವಿದ್ಯಾನಗರ, ಕೆ.ಎಸ್.ಆರ್.ಟಿ.ಸಿ., ಶಾಂತಿನಗರ, ಗೋಣಿಕೊಪ್ಪ ರಸ್ತೆ, ನೆಹರುನಗರ, ಪಂಜರ್‌ಪೇಟೆ, ಸಿಲ್ವನಗರ, ವಿಜಯನಗರ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಈ ಮೇಲೆ ತಿಳಿಸಿರುವ ಸಮಯದಲ್ಲಿ ಹಾಗೂ ಸ್ಥಳದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ, ಕಾರ್ಯನಿರ್ವಾಹಕ ಇಂಜಿನಿಯರ್ (ವಿ) ಕಾರ್ಯ ಮತ್ತು ಪಾಲನೆ ವಿಭಾಗ ಕೋರಿದ್ದಾರೆ.