ಪ್ರತಿಭಾ ಕಾರಂಜಿ: ಕಕ್ಕಬ್ಬೆ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

ಪ್ರತಿಭಾ ಕಾರಂಜಿ: ಕಕ್ಕಬ್ಬೆ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

ವರದಿ:ಝಕರಿಯ ನಾಪೋಕ್ಲು

ನಾಪೋಕ್ಲು : ಕುಂಜಿಲ ಆಕ್ಸ್ ಫರ್ಡ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜರುಗಿದ ಕಕ್ಕಬ್ಬೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಭಾಗವಹಿಸಿದ ಕಕ್ಕಬ್ಬೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 10 ವೈಯಕ್ತಿಕ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಹಾಗೂ 5 ತೃತೀಯ ಸ್ಥಾನ ಪಡೆದು ಸಾಧನೆ ಮಾಡಿದ್ದಾರೆ. ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಶಾಲೆಯ ಮುಖ್ಯ ಶಿಕ್ಷಕಿ ಮಾಲತಿ ಹಾಗೂ ಎಸ್ ಡಿಎಂಸಿ ಸದಸ್ಯರು ಹಾಗೂ ಶಿಕ್ಷಕ ವೃಂದ ಅಭಿನಂದಿಸಿದ್ದಾರೆ.