ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ತಾಲೂಕು ಮಟ್ಟದ ಅಥ್ಲೆಟಿಕ್ಸ್:ನಾಪೋಕ್ಲು ಕೆಪಿಎಸ್ ಶಾಖೆಯ ಲಿಖಿತ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ತಾಲೂಕು ಮಟ್ಟದ ಅಥ್ಲೆಟಿಕ್ಸ್:ನಾಪೋಕ್ಲು ಕೆಪಿಎಸ್ ಶಾಖೆಯ ಲಿಖಿತ ಜಿಲ್ಲಾ ಮಟ್ಟಕ್ಕೆ ಆಯ್ಕೆ

ವರದಿ:ಝಕರಿಯ ನಾಪೋಕ್ಲು

ನಾಪೋಕ್ಲು :ನಾಪೋಕ್ಲುಬಳಿಯ ಚೆರಿಯಪರಂಬು ವಿನಲ್ಲಿರುವ ಕರ್ನಾಟಕ ಪಬ್ಲಿಕ್ ಶಾಲೆಯ ಜನರಲ್ ಕೆ.ಎಸ್. ತಿಮ್ಮಯ್ಯ ಆಟದ ಮೈದಾನದಲ್ಲಿ ನಡೆದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ತಾಲೂಕು ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ನಾಪೋಕ್ಲು ಕರ್ನಾಟಕ ಪಬ್ಲಿಕ್ ಶಾಲೆಯ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಎ.ಟಿ.ಲಿಖಿತ 1500 ಮೀಟರ್ ಓಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಯ ಸಾಧನೆಗೆ ಶಾಲೆಯ ಆಡಳಿತ ಮಂಡಳಿ ಪದಾಧಿಕಾರಿಗಳು ಹಾಗೂ ಶಿಕ್ಷಕ ವೃಂದ ಅಭಿನಂದನೆ ಸಲ್ಲಿಸಿದ್ದಾರೆ.