ಕುಶಾಲನಗರ ಕಾರ್ಯನಿರತ ಪತ್ರಕರ್ತರ‌ ಸಂಘದಿಂದ ಪತ್ರಿಕಾ ದಿನಾಚರಣೆ

Jul 1, 2026 - 12:22
 0  78
ಕುಶಾಲನಗರ ಕಾರ್ಯನಿರತ ಪತ್ರಕರ್ತರ‌ ಸಂಘದಿಂದ ಪತ್ರಿಕಾ ದಿನಾಚರಣೆ

ಕುಶಾಲನಗರ: ಪತ್ರಿಕಾ ದಿನಾಚರಣೆ ಅಂಗವಾಗಿ ಕುಶಾಲನಗರ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪಟ್ಟಣದ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯ ವಿದ್ಯಾರ್ಥಿನಿಯರಿಗೆ ಪ್ರತಿನಿತ್ಯ ಉಚಿತ ದಿನಪತ್ರಿಕೆ ವಿತರಣಾ ಕಾರ್ಯಕ್ರಮಕ್ಕೆ ಶನಿವಾರ ಚಾಲನೆ ನೀಡಲಾಯಿತು.

ವಿದ್ಯಾರ್ಥಿಗಳಲ್ಲಿ ಪತ್ರಿಕೆ ಓದುವ ಹವ್ಯಾಸ ಬೆಳೆಸಿ ಪ್ರಚಲಿತ ವಿದ್ಯಮಾನಗಳ ಅರಿವು ಮೂಡಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ಎಂ.ಎನ್. ಚಂದ್ರಮೋಹನ್ ತಿಳಿಸಿದರು.

 4 ದಿನಪತ್ರಿಕೆ ವಿತರಣೆ: ಶಾಲೆಗೆ ಪ್ರತಿನಿತ್ಯ _ಶಕ್ತಿ_, _ವಿಜಯ ಕರ್ನಾಟಕ_, _ಸಂಯುಕ್ತ ಕರ್ನಾಟಕ_ ಹಾಗೂ _ಪ್ರಜಾ ಸತ್ಯ_ ದಿನಪತ್ರಿಕೆಗಳನ್ನು ಉಚಿತವಾಗಿ ನೀಡಲಾಗುವುದು ಹೇಳಿದರು.

 ಎಸ್‌ಎಲ್‌ವಿ ಬುಕ್ ಸ್ಟಾಲ್ ಸಹಕಾರ: ಎಸ್‌ಎಲ್‌ವಿ ಬುಕ್ ಸ್ಟಾಲ್ ಮಾಲೀಕರು ವಿದ್ಯಾರ್ಥಿನಿಯರಿಗೆ ಉಚಿತವಾಗಿ ನೋಟ್‌ಬುಕ್ ಹಾಗೂ ಪೆನ್ ವಿತರಿಸುತ್ತಿದ್ದಾರೆ. "ಪತ್ರಿಕೆಗಳು ಸಮಾಜದ ಕನ್ನಡಿ. ವಿದ್ಯಾರ್ಥಿ ದೆಸೆಯಿಂದಲೇ ಪತ್ರಿಕೆ ಓದುವ ಹವ್ಯಾಸ ಬೆಳೆಸಿಕೊಂಡರೆ ಜ್ಞಾನ ವೃದ್ಧಿಯಾಗುತ್ತದೆ. ಪ್ರಚಲಿತ ವಿದ್ಯಮಾನಗಳ ಅರಿವು ಮೂಡುತ್ತದೆ" ಎಂದು ಅಧ್ಯಕ್ಷ ಎಂ.ಎನ್. ಚಂದ್ರಮೋಹನ್ ವಿದ್ಯಾರ್ಥಿನಿಯರಿಗೆ ಕಿವಿಮಾತು ಹೇಳಿದರು.

ಈ ಸಂದರ್ಭ ಪತ್ರಿಕೆ ವಿತರಕ ಪ್ರಕಾಶ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಶಾಲಾ ಮುಖ್ಯ ಶಿಕ್ಷಕರು, ಶಿಕ್ಷಕ ವೃಂದ, ಪತ್ರಕರ್ತರ ಸಂಘದ ಪದಾಧಿಕಾರಿಗಳು, ಎಸ್‌ಎಲ್‌ವಿ ಬುಕ್ ಸ್ಟಾಲ್ ಮಾಲೀಕರು ಹಾಗೂ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು. ಶಾಲಾ ಆಡಳಿತ ಮಂಡಳಿ ಕೃತಜ್ಞತೆ ಸಲ್ಲಿಸಿತು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0