ಸೋಮವಾರಪೇಟೆ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ

ಸೋಮವಾರಪೇಟೆ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ

ಸೋಮವಾರಪೇಟೆ:ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಸೋಮವಾರಪೇಟೆ ತಾಲೂಕು ಸಂಘದಿಂದ ಪತ್ರಿಕಾ ದಿನಾಚರಣೆ ಕಾರ್ಯಕ್ರಮವು ನೇರುಗಳಲೆ ಗ್ರಾಮ ಪಂಚಾಯತ್ ವ್ಯಾಪ್ತಿಯ ನೇರುಗಳಲೆ ಸರ್ಕಾರಿ ಪ್ರೌಢ ಶಾಲಾ ಆವರಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದ ಭುವನ ಮಂದಾರ ರೈತ ಉತ್ಪಾದಕರ ಸಂಘದ ಅಧ್ಯಕ್ಷರು ಹಾಗೂ ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷರಾದ ಎಸ್. ಎಂ. ಡಿಸಿಲ್ವ ಉದ್ಘಾಟನೆ ಮಾಡಿ ಮಾತನಾಡಿ, ಇಂದು ಕೊಡಗಿನ ಪತ್ರಕರ್ತರು ಉತ್ತಮ ಕಾರ್ಯ ನಿರ್ವಹಿಸುತ್ತಿರುವುದು ಕೊಡಗಿಗೆ ಹೆಮ್ಮೆಯ ವಿಷಯ. ಪತ್ರಕರ್ತರು ಒಬ್ಬರನ್ನು ಬೆಳೆಸಲು ಬಹುದು ಹಾಗೂ ಕೆಳಗೆ ಇಳಿಸಲು ಬಹುದಾದ ಶಕ್ತಿ ಪತ್ರಕರ್ತರಿಗೆ ಇದೆ ಎಂದರು.

 ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಗಳಾಗಿ ಪಾಲ್ಗೊಂಡಿದ್ದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಸವಿತಾ ರೈ ಮಾತನಾಡಿ ವಿದ್ಯಾರ್ಥಿಗಳು ಪ್ರತಿ ನಿತ್ಯ ದಿನ ಪತ್ರಿಕೆ ಓದುವ ಅಭ್ಯಾಸ ಮಾಡಿಕೊಳ್ಳಬೇಕು. ಮಕ್ಕಳು ತಮ್ಮ ಗುರುಗಳನ್ನು ಪೂಜಿಸಬೇಕು ಗುರು ಆಶೀರ್ವಾದ ಇದ್ದರೆ ಏನು ಬೇಕಾದರು ಸಾಧಿಸಬಹುದು ಎಂದರು.ಇಂದು ಪತ್ರಕರ್ತರ ಜವಾಬ್ದಾರಿ ತುಂಬಾ ಮಹತ್ವ ಪಡೆಯುತ್ತಿದೆ, ಪತ್ರಕರ್ತರು ಸಮಾಜದ ಕಣ್ಣು ಇದ್ದಂತೆ ಪತ್ರ ಕರ್ತರು ಯಾರು ತಪ್ಪು ದಾರಿಯಲ್ಲಿ ನಡೆಯಬಾರದು ಸರ್ಕಾರಿ ಶಾಲೆ ಎಂಬ ಕೀಳರಿಮೆ ಮಕ್ಕಳಲ್ಲಿ ಬೇಡ ಎಂದರು.

ನೇರುಗಳಲೆ ಗ್ರಾಮ ಪಂಚಾಯತ್ ಅಧ್ಯಕ್ಷ ವಿನೋದ್ ಕುಮಾರ್ ಮಾತನಾಡಿ ಪತ್ರಕರ್ತರ ಜವಾಬ್ದಾರಿ ದೊಡ್ಡದು, ಇಂದು ಸಮಾಜದ ಅಂಕು ಡೊಂಕು ತಿದ್ದುತ್ತಿರುವುದು ಪತ್ರಕರ್ತರು ಎಂದರು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರವಿಕುಮಾರ್, ಶಾಲಾ ಮುಖ್ಯ ಶಿಕ್ಷಕಿ ರಾಜೇಶ್ವರಿ, ಮಾತನಾಡಿದರು, ಪ್ರಸ್ತಾವಿಕವಾಗಿ ಸೋಮವಾರಪೇಟೆ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ವಿಜಯ್ ಹಾನಗಲ್ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಿರಿಕರ ರವಿ ವಹಿಸಿದ್ದರು.

ಇದೇ ಸಂದರ್ಭದಲ್ಲಿ ತಾಲೂಕು ಸಂಘದ ಉಪಾಧ್ಯಕ್ಷ ವಿಶ್ವಕುಂಬೂರು, ಪ್ರಧಾನ ಕಾರ್ಯದರ್ಶಿ ದಿನೇಶ್ ಮಾಲಂಬಿ, ಜಂಟಿ ಕಾರ್ಯದರ್ಶಿ ಲಕ್ಷ್ಮಿ ಕಾಂತ್ ಕೋಮರಪ್ಪ, ನಿರ್ದೇಶಕರಾದ ಭಾಸ್ಕರ್ ಮುಳ್ಳೂರು, ಸುರೇಶ್ ಚೆರಿಯಾಮನೆ, ಕೊಡಗ ಪ್ರೆಸ್ ಕ್ಲಬ್ ಸೌಹಾರ್ದ ಸಹಕಾರ ಸಂಘದ ನಿರ್ದೇಶಕ ಸಂತೋಷ್ ರೈ,ವಿಜೇತ್ ಮುಂತಾದವರು ಇದ್ದರು. ಶಿಕ್ಷಕಿ ತೇಜಾಕ್ಷಿ ನಿರೂಪಿಸಿ,ಶಿಕ್ಷಕ ರತ್ನಾಕರ್ ಸ್ವಾಗತಿಸಿ,ಕಾರ್ಯನಿರತ ಪತ್ರಕರ್ತರ ಸಂಘದ ಖಜಾಂಚಿ ಭಾಸ್ಕರ್ ಬಿ. ಎ ವಂದಿಸಿದರು. ಇದೆ ಸಂದರ್ಭದಲ್ಲಿ ಪತ್ರಿಕಾ ವಿತರಕ ಲೋಕೇಶ್, ಹಾಗೂ ಜಿಲ್ಲಾ ಪ್ರಶಸ್ತಿ ವಿಜೇತರಾದ ಹಿರಿಕರ ರವಿ ಹಾಗೂ ಮಾಲಂಬಿ ದಿನೇಶ್ ಇವರನ್ನು ಸನ್ಮಾನಿಸಲಾಯಿತು.