ಪ್ರಾಥಮಿಕ ಶಾಲಾ ಬಾಲಕರ ಹಾಕಿ ಪಂದ್ಯಾವಳಿ: ಕಕ್ಕಬ್ಬೆ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಪ್ರಾಥಮಿಕ ಶಾಲಾ ಬಾಲಕರ ಹಾಕಿ ಪಂದ್ಯಾವಳಿ: ಕಕ್ಕಬ್ಬೆ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ವರದಿ:ಝಕರಿಯ ನಾಪೋಕ್ಲು

ನಾಪೋಕ್ಲು : ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ಬಾಲಕರ ಹಾಕಿ ಪಂದ್ಯಾವಳಿಯಲ್ಲಿ ಕಕ್ಕಬ್ಬೆ ಕೇಂದ್ರ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಮಡಿಕೇರಿಯಲ್ಲಿ ನಡೆದ ಪಂದ್ಯಾವಳಿಯಲ್ಲಿ ಶಾಲೆಯ ಏಳು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇದರಲ್ಲಿ ಟಿ.ಎ.ಜಹೀರ್ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಶಾಲೆಯ ಆಡಳಿತ ಮಂಡಳಿ ಪದಾಧಿಕಾರಿಗಳು ಹಾಗೂ ಶಿಕ್ಷಕ ವೃಂದ ಅಭಿನಂದನೆ ಸಲ್ಲಿಸಿದ್ದಾರೆ.