ಕೊಡಗು ವಿಶ್ವವಿದ್ಯಾಲಯದ ಕುಲಪತಿಗಳಾಗಿರುವ ಪ್ರೊ. ಅಶೋಕ ಸಂಗಪ್ಪ ಆಲೂರ ಅವರಿಗೆ ಭಾರತರತ್ನ ಡಾ ಸರ್.ಎಂ.ವಿಶ್ವೇಶ್ವರಯ್ಯ ವಿಜ್ಞಾನ ಪುರಸ್ಕಾರ -2026

Mar 6, 2026 - 13:40
 0  204
ಕೊಡಗು ವಿಶ್ವವಿದ್ಯಾಲಯದ ಕುಲಪತಿಗಳಾಗಿರುವ ಪ್ರೊ. ಅಶೋಕ ಸಂಗಪ್ಪ ಆಲೂರ ಅವರಿಗೆ ಭಾರತರತ್ನ ಡಾ ಸರ್.ಎಂ.ವಿಶ್ವೇಶ್ವರಯ್ಯ ವಿಜ್ಞಾನ ಪುರಸ್ಕಾರ -2026

ಕುಶಾಲನಗರ: ಸ್ವದೇಶಿ ವಿಜ್ಞಾನ ಆಂದೋಲನ-ಕರ್ನಾಟಕ, ಚಾಮರಾಜನಗರ ವಿಶ್ವವಿದ್ಯಾಲಯ, ಚಾಮರಾಜನಗರ ಹಾಗೂ ಕೊಡಗು ವಿಶ್ವವಿದ್ಯಾಲಯ, ಕೊಡಗು ಇವರುಗಳ ಸಹಯೋಗದೊಂದಿಗೆ ಹಾವೇರಿ ವಿಶ್ವವಿದ್ಯಾಲಯ, ಹಾವೇರಿ ಇವರು ಆಯೋಜಿಸಿರುವ "18ನೇ ಕನ್ನಡ ವಿಜ್ಞಾನ ಸಮ್ಮೇಳನ" ದಲ್ಲಿ ಕೊಡಗು ವಿಶ್ವವಿದ್ಯಾಲಯದ ಕುಲಪತಿಗಳಾಗಿರುವ ಪ್ರೊ. ಅಶೋಕ ಸಂಗಪ್ಪ ಆಲೂರ ಅವರಿಗೆ ಭಾರತರತ್ನ ಡಾ. ಸರ್.ಎಂ.ವಿಶ್ವೇಶ್ವರಯ್ಯ ವಿಜ್ಞಾನ ಪುರಸ್ಕಾರ -2026 ನೀಡಿ ಗೌರವಿಸಿದೆ.

ಸರ್ಕಾರಿ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸಮಿತಿಗಳು ಮತ್ತು ಮಿಷನ್‌ ಗಳಲ್ಲಿ ಅಧ್ಯಕ್ಷರಾಗಿ ಹಾಗೂ ಸದಸ್ಯರಾಗಿ ಕಾರ್ಯನಿರ್ವಹಿಸಿ, ವಿಶ್ವ ಆಹಾರ ಸಂಸ್ಥೆ, ವಿಶ್ವ ಬ್ಯಾಂಕ್ ಸೇರಿದಂತೆ ಹಲವಾರು ಅಂತಾರಾಷ್ಟ್ರೀಯ ಸಂಸ್ಥೆಗಳ ಯೋಜನೆಗಳ ಅನುಷ್ಠಾನದಲ್ಲಿ ಪ್ರಮುಖ ಪಾತ್ರವಹಿಸಿರುವಿರಿ. ಐವತ್ತಕ್ಕೂ ಅಧಿಕದೇಶಗಳಿಗೆ ಭೇಟಿ ನೀಡಿ ಜಾಗತಿಕ ಮಟ್ಟದಲ್ಲಿ ಕೃಷಿ ಮತ್ತು ಅಭಿವೃದ್ಧಿ ಕ್ಷೇತ್ರಗಳಿಗೆ ಅಮೂಲ್ಯ ಕೊಡುಗೆ ನೀಡಿರುವಿರಿ. ಕೃಷಿಕ್ಷೇತ್ರ ಮತ್ತು ತತ್ಸಂಬದ್ಧ ಸಂಶೋಧನಾ ಕಾರ್ಯಗಳನ್ನು ಆದರದಿಂದ ಸ್ಮರಿಸುತ್ತ 18ನೇ ಕನ್ನಡವಿಜ್ಞಾನ ಸಮ್ಮೇಳನದ ಈ ಶುಭ ಸಂದರ್ಭದಲ್ಲಿ ತಮ್ಮನ್ನು ಸನ್ಮಾನಿಸಿ ಗೌರವಿಸುವ ಸುಯೋಗ ಸ್ವದೇಶಿ ವಿಜ್ಞಾನ ಅಂದೋಳನ - ಕರ್ನಾಟಕ ಸಂಸ್ಥೆಯ ಪಾಲಿಗೆ ಬಂದಿರುವುದು ಅತ್ಯಂತ ಸಂತಸದ ವಿಷಯ. 2026ನೇ ಸಾಲಿನ ಡಾ.ಸರ್.ಎಂ.ವಿಶ್ವೇಶ್ವರಯ್ಯ ವಿಜ್ಞಾನ ಪುರಸ್ಕಾರವನ್ನು ಪ್ರದಾನ ಮಾಡುವುದರ ಮೂಲಕ ಸ್ವದೇಶಿ ವಿಜ್ಞಾನ ಅಂದೋಳನ-ಕರ್ನಾಟಕ ಸಂಸ್ಥೆಯು ತಮ್ಮ ಮಹತ್ಸಾಧನೆಯನ್ನು ಗೌರವಿಸಿದ ಗೌರವಕ್ಕೆ ಪಾತ್ರವಾಗುತ್ತದೆ. ಕೃಷಿ ಸಂಶೋಧನೆ ಮತ್ತು ಉನ್ನತ ಶಿಕ್ಷಣ ಕ್ಷೇತ್ರಕ್ಕೆ ತಮ್ಮ ಸೇವೆಯನ್ನು ಮುಂದುವರಿಸಲು ಉತ್ತೇಜನ ನೀಡುವ ನಿಟ್ಟಿನಲ್ಲಿ ಈ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0