ಕೊಡಗು ವಿಶ್ವವಿದ್ಯಾಲಯದ ಕುಲಪತಿಗಳಾಗಿರುವ ಪ್ರೊ. ಅಶೋಕ ಸಂಗಪ್ಪ ಆಲೂರ ಅವರಿಗೆ ಸರ್ದಾರ್ ಜೋಗಾಸಿಂಗ್ ಕಲ್ಯಾಣ ಕರ್ನಾಟಕ ಪ್ರಶಸ್ತಿ-2026
admincoorgdaily

ಕುಶಾಲನಗರ: ಶ್ರೀ ನಾನಕ ಝಿರಾ ಸಾಹೇಬ್ ಫೌಂಡೇಷನ್ ವತಿಯಿಂದ ಗುರುನಾನಕ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ದಿ.ಸರ್ದಾರ್ ಜೋಗಾಸಿಂಗ್ 93ನೇ ಜನ್ಮ ದಿನದ ನಿಮಿತ್ತ ಕೊಡಗು ವಿಶ್ವವಿದ್ಯಾಲಯದ ಕುಲಪತಿಗಳಾಗಿರುವ ಪ್ರೊ. ಅಶೋಕ ಸಂಗಪ್ಪ ಆಲೂರ ಅವರಿಗೆ ಬೀದರ್‌ನ ಗುರುನಾನಕ ದೇವ ಇಂಜಿನಿಯರಿಂಗ್ ಕಾಲೇಜಿನಲ್ಲಿ ಶೈಕ್ಷಣಿಕ ಮತ್ತು ಕೃಷಿಯಲ್ಲಿನ ಸೇವೆಗಾಗಿ ಉನ್ನತ ಶಿಕ್ಷಣ ಮತ್ತು ಕೃಷಿ ದಾರ್ಶನಿಕ ಸರ್ದಾರ್ ಜೋಗಾಸಿಂಗ್ ಕಲ್ಯಾಣ ಕರ್ನಾಟಕ ಪ್ರಶಸ್ತಿ-2026 ಪ್ರಶಸ್ತಿ ನೀಡಿ ಗೌರವಿಸಿದೆ.
ಸಮಾಜದಲ್ಲಿ ದೀನ-ದುರ್ಬಲರಿಗೆ ಸಹಾಯ ಮಾಡುವ ಸೇವಾಗುಣ, ಪ್ರಾಮಾಣಿಕತೆಯಿಂದ ಸಮಾಜಕ್ಕೆ ದಾರಿ ತೋರಿಸುವಂತಹ ನಿಜವಾದ ನಾಯಕತ್ವ ಗುಣದ ಮೂಲಕ ಗಣನೀಯ ಸೇವೆ ಸಲ್ಲಿಸಿದ ಸಾಧಕರಿಗೆ ಗುರುತಿಸಿ, ಸಮಾಜ ಸೇವಕರಿಗೆ ಇನ್ನಷ್ಟು ಕೆಲಸ ಮಾಡಲು ಪ್ರೇರಣೆ ನೀಡುವ ಉದ್ದೇಶದಿಂದ ಈ ಪ್ರತಿಷ್ಠಿತ ಪ್ರಶಸ್ತಿ ನೀಡಲಾಗುತ್ತದೆ. ಶೈಕ್ಷಣಿಕ ಮತ್ತು ಕೃಷಿ ಕ್ಷೇತ್ರದಲ್ಲಿನ ಸಾಧನೆಯನ್ನು ಗುರುತಿಸಿ ಪ್ರೊ. ಅಶೋಕ ಸಂಗಪ್ಪ ಆಲೂರ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.