ಪರೀಕ್ಷಾ ಕೇಂದ್ರದ ಸುತ್ತ ನಿಷೇಧಾಜ್ಞೆ

ಪರೀಕ್ಷಾ ಕೇಂದ್ರದ ಸುತ್ತ ನಿಷೇಧಾಜ್ಞೆ

ಮಡಿಕೇರಿ ಜೂ.17:-ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಜೂನ್, 21 ರಂದು 2026 ರ ರೀ-ನೀಟ್(ಯುಜಿ) ಪರೀಕ್ಷೆ ನಡೆಯಲಿದ್ದು, ಈ ಪರೀಕ್ಷಾ ಕೇಂದ್ರದಲ್ಲಿ ಯಾವುದೇ ಅವ್ಯವಹಾರಗಳಿಲ್ಲದೆ ಸುಗಮವಾಗಿ ಪರೀಕ್ಷೆ ನಡೆಸುವ ಸಲುವಾಗಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023 ರ ಕಲಂ 163 ರಡಿ ದತ್ತವಾದ ಅಧಿಕಾರದಂತೆ ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿನ ಪ್ರದೇಶವನ್ನು ನಿರ್ಭಂದಿತ ಸ್ಥಳ ಎಂದು ಘೋಷಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಆದೇಶಿಸಿದ್ದಾರೆ. 

        ಈ ವ್ಯಾಪ್ತಿಯಲ್ಲಿರುವ ಎಲ್ಲಾ ಜೆರಾಕ್ಸ್ ಅಂಗಡಿ ಮತ್ತು ಸೈಬರ್ ಸೆಂಟರ್‍ಗಳನ್ನು ಮುಚ್ಚಿಸತಕ್ಕದೆಂದು ಸಹ ತಿಳಿಸಿದ್ದಾರೆ. ಈ ಆದೇಶವು ಪರೀಕ್ಷಾ ದಿನದಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5.30 ಗಂಟೆಯವರೆಗೆ ಮಾತ್ರ ಚಾಲ್ತಿಯಲ್ಲಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ತಿಳಿಸಿದ್ದಾರೆ.